6

ಗಾಂಧೀಜಿ, ಶಾಸ್ತ್ರಿಜಿ ಸ್ಮರಣೆ : 23 ಕ್ಷೇತ್ರಗಳ ಸೇವಾನಿರತ ನೌಕರರಿಗೆ ಸನ್ಮಾನ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 2- ಸುಮಾರು ೭ ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶವಾಗಾರ ನಿರ್ವಾಹಕ ಅಂದ್ರಯ್ಯ, ಅಂಗನವಾಡಿ ಕಾರ್ಯಕರ್ತೆ ಮಹಾಲಕ್ಷ್ಮೀ, ಆರೋಗ್ಯ ಇಲಾಖೆಯ ಡಿ.ಸುನಿತಾ, ತ್ಯಾಜ್ಯ ನಿರ್ವಹಣೆ ಮಾಡುವ ಶ್ರೀನಿವಾಸುಲು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು ಹೀಗೆ ಸುಮಾರು ೨೩ ವಿವಿಧ ಕ್ಷೇತ್ರಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಸಮಾಜದ ಕೆಳಹಂತದ ಸೇವಾ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸಿ, ಗೌರವಿಸಿದ ಅರ್ಥಪೂರ್ಣ ಕಾರ್ಯಕ್ರಮವನ್ನು ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಕೋಶದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಶ್ರಮದಾನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವಾ ಕೊಡುಗೆ ನೀಡುತ್ತಿರುವ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮವನ್ನು ವಿವಿಯ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಕುಲಪತಿಗಳು, ಸಮುದಾಯ ಸೇವೆಯಲ್ಲಿ ತೊಡಗಿರುವ ವಿಶ್ವವಿದ್ಯಾಲಯೇತರ ವ್ಯಕ್ತಿಗಳನ್ನು ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯವು ಗುರುತಿಸಿ ಗೌರವಿಸುತ್ತಿದೆ. ಗಾಂಧೀಜಿಯವರ ಆಶಯದಂತೆ ಸೌಲಭ್ಯ ವಂಚಿತ ವರ್ಗದ ಸಿಬ್ಬಂದಿಯನ್ನು ಗೌರವಿಸುವ ಪರಿಪಾಠಕ್ಕೆ ವಿವಿಯು ನಾಂದಿ ಹಾಡಿದೆ. ತಮ್ಮ ಸೇವೆಯಲ್ಲಿ ಬದ್ಧತೆ ಪ್ರದರ್ಶಿಸುವ ವಿವಿಧ ಸೇವಾ ವಲಯದ ನೌಕರರಿಗೆ ವಿವಿ ವತಿಯಿಂದ ಮುಂಬರುವ ದಿನಗಳಲ್ಲಿ ನಗದು ಬಹುಮಾನ ನೀಡುವುದಾಗಿ ಎಂದು ಅವರು ಘೋಷಿಸಿದರು.

ಕುಲಸಚಿವರಾದ ರುದ್ರೇಶ್ ಎಸ್ ಎನ್ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಯು ದೇಶದ ಆಸ್ತಿಯಾಗಿದ್ದು, ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಮಹಾತ್ಮ ಗಾಂಧೀಯವರ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನಕ್ಕೆ ವಿವಿಯು ಇಂದು ಪ್ರಯತ್ನಿಸಿದೆ. ಕಾಯಕವೇ ಕೈಲಾಸ ಎಂದು ನಂಬಿರುವ ಎಲ್ಲ ಸೇವಾನಿರತ ವ್ಯಕ್ತಿಗಳನ್ನು ನಾವೆಲ್ಲ ಗೌರವಿಸಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!