2

20 ರಂದು ಕನ್ನಡ ರಥ ಜ್ಯೋತಿ ಆಗಮನ ಸ್ವಾಗತಕ್ಕೆ ಸಹಕರಿಸಿ : ಎಚ್.ವಿಶ್ವನಾಥ್

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 16- ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರ ಮೇಲಿದೆ ಎಂದು ತಹಸಿಲ್ದಾರ್ ಎಚ್ ವಿಶ್ವನಾಥ ಹೇಳಿದರು.

ನಗರದ ತಾಲೂಕ ಕಚೇರಿ ಸಭಾಭವನದಲ್ಲಿ ಜರುಗಿದ 87ನೇ ಮಂಡ್ಯ ನಗರದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನ 87ನೇ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ರಥ ಜ್ಯೋತಿ ಸಿರುಗುಪ್ಪ ತಾಲೂಕಿಗೆ ಅಕ್ಟೋಬರ್ 20 ರಂದು ಆಗಮಿಸುವ ಕನ್ನಡ ರಥ ಜ್ಯೋತಿಗೆ ಅದ್ದೂರಿ ಸ್ವಾಗತವನ್ನು ಕೋರಲು ಸರ್ವರೂ ಸಹಕರಿಸಬೇಕು ಎಂದರು.

ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ವರ್ಗ ಶಾಲಾ ಮಕ್ಕಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಹಶೀಲ್ದಾರ್ ಹೆಚ್ ವಿಶ್ವನಾಥ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.

ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್, ತಾಲೂಕ ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ಡಾ.ಮಧುಸೂಧನ ಕಾರಿಗನೂರ್, ಸಿಪಿಐ ಹನುಮಂತಪ್ಪ, ತಾಲೂಕ ಆರೋಗ್ಯ ಅಧಿಕಾರಿ ಡಾ.ಬಿ.ಈರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗುರಪ್ಪ, ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಜಿ.ಪ್ರದೀಪ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಗಾದಿಲಿಂಗಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಮಾ, ಕನ್ನಡ ಸಾಹಿತ್ಯ ಪರಿಷತ್ ಜಾಗೃತಿ ಸಮಿತಿ ಸಾಕ್ಷರತಾ ಅಬ್ದುಲ್ ನಬಿ, ಗ್ರೇಡ್-೨ ತಹಸಿಲ್ದಾರ್ ಕುಮಾರಿ ಸತ್ಯನ್, ಶಿರಸ್ತೇದಾರ್ ಸಿದ್ದಾರ್ಥ ಕಾರಂಜಿ, ಶೇಖರ್ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!