1

ಪ್ರಜಾತಂತ್ರದಲ್ಲಿ ಮಾಧ್ಯಮ ಶಕ್ತಿಶಾಲಿ : ಹಾಲಪ್ಪ ಆಚಾರ್

ಕರುನಾಡ ಬೆಳಗು ಸುದ್ದಿ

ಕುಕನೂರು, 22- ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಕೂಡ ಶಕ್ತಿಶಾಲಿಯಾಗಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ನಗರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಧ್ಯಮ ಮತ್ತು ಪತ್ರಿಕಾರಂಗ ಆಯುಧವಾಗಿದ್ದು, ತಪ್ಪು ಮತ್ತು ಸರಿ ತಿಳಿಸುವ ಕಾರ್ಯ ಮಾಡುತ್ತಿದೆ. ತಾಲೂಕು ಘಟಕ ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಪಿಎಚ್‌ಡಿ, ವೈದ್ಯರು, ಹೆಚ್ಚಿನ ವ್ಯಾಸಂಗ ಮಾಡುವವರನ್ನು ಗುರುತಿಸಿ, ಪ್ರೋತ್ಸಾಹಿಸುವುದು ಉತ್ತಮ ಬೆಳವಣಿಗೆ ಎಂದರು.

ಲೇಖಕ ಕೆ.ಬಿ ಬ್ಯಾಳಿ ಮಾತನಾಡಿ, ಪತ್ರಿಕೆಗಳು ಸಮಾಜವನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು ಎಂದರು.

ತಾಪ0 ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ, ಸಮಾಜ ಸೇವಕ ಶಿವಣ್ಣ ರಾಯರೆಡ್ಡಿ ಮಾತನಾಡಿದರು.

ಅನ್ನದಾನೇಶ್ವರ ಶಾಖ ಮಠದ ಡಾ.ಮಹಾದೇವ ಸ್ವಾಮೀಜಿ, ಇಟಗಿ ಶಿವಶರಣ ಗದಿಗೆಪ್ಪಜ್ಜನವರು ಸಾನಿಧ್ಯವಹಿಸಿದ್ದರು.

ಕಾನಿಪ ಸಂಘದ ತಾಲೂಕ ಅಧ್ಯಕ್ಷ ನಾಗರಾಜ್ ಬೆಣಕಲ್ ಮಾತನಾಡಿದರು.

ವೈದ್ಯರು, ಪಿಎಚ್‌ಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಎಪಿಎಂಸಿ ಕಾರ್ಯದರ್ಶಿ ಗುರುಸ್ವಾಮಿ ಗುಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಭು ಜೋಳದ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಮೇಟಿ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಹುರಳಿ, ಪ್ರಮುಖರಾದ ದೇವಪ್ಪ ಅರಕೇರಿ, ರೆಹಮಾನ್ ಸಾಬ್ ಮಕ್ಕಪ್ಪನವರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಸರ್ವ ಸದಸ್ಯರು ಇದ್ದರು.

Leave a Reply

Your email address will not be published. Required fields are marked *

error: Content is protected !!