
ಹಳಿಯಾಳ ಆರ್‌ಸೆಟಿ ಸಂಸ್ಥೆ : ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಪುರುಷರ ಹೊಲಿಗೆ ತರಬೇತಿ ಮತ್ತು ಸಮಗ್ರ ಕೃಷಿ ಉದ್ಯಮ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕರಿಗಾಗಿ ಆಗಸ್ಟ್ ಮಾಹೆಯ ಅಂತ್ಯದಲ್ಲಿ 30 ದಿನಗಳ ಪುರುಷರ ಹೊಲಿಗೆ ತರಬೇತಿ ಮತ್ತು 13 ದಿನಗಳ ಸಮಗ್ರ ಕೃಷಿ ತರಬೇತಿಗಳನ್ನು ನೀಡಲಾಗುತ್ತಿದೆ.
ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳೊಂದಿಗೆ ಆಗಸ್ಟ್ 17ರೊಳಗಾಗಿ ನೋಂದಾಯಿಸಬೇಕು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 9980510717, 9482188780 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.