
7ರಂದು ಕೊಪ್ಪಳ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ಆಗಸ್ಟ್ 05 (ಕರ್ನಾಟಕ ವಾರ್ತೆ): ಗೃಹ ಸಚಿವರಾದ ಡಾ ಜಿ.ಪರಮೇಶ್ವರ ಅವರು ಆಗಸ್ಟ್ 07ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು, ಅಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ, ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಆಗಮಿಸುವರು. ಇತ್ತೀಚೆಗೆ ಮೃತರಾದ ಸಬ್‌ಇನ್ಸ್ಪೆಕ್ಟರ್ ಪರುಶುರಾಮ್ ಅವರ ಮನೆಗೆ ಸೌಜನ್ಯದ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವರು. ಬಳಿಕ ಮಧ್ಯಾಹ್ನ 12.30ಕ್ಕೆ ಸೋಮನಾಳದಿಂದ ನಿರ್ಗಮಿಸಿ ಹೊಸಪೇಟೆ ಕಡೆಗೆ ಪ್ರಯಾಣ ಬೆಳಸುವರು ಎಂದು ಗೃಹ ಸಚಿವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.