3

ಸನ್ಮಾನ ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ : ಬೀರಪ್ಪ ಅಂಡಗಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 19- ಸನ್ಮಾನ ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ ಎಂದು ಸರಕಾರಿ ನೌಕರರ ಸಂಘದ ನೂತನ ನಿರ್ದೇಶಕರು ಹಾಗೂ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.

ನಗರದ ಸಿಪಿಎಸ್ ಶಾಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ವಿಜೇತರಾದ ಹಿನ್ನಲೆಯಲ್ಲಿ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಾ, ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ ನಂತರ ಮಾಡುವ ಸನ್ಮಾನವು ಅವರ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತವೆ. ಇತ್ತಿಚೇಗೆ ಜರುಗಿದ ಚುನಾವಣೆಯಲ್ಲಿ ತಾಲೂಕಿನ ಶಿಕ್ಷಕರು ನಮ್ಮ ಮೇಲೆ ನಿರೀಕ್ಷೆಯನ್ನು ಇಟ್ಟುಕೊಂಡು ಹೆಚ್ಚು ಮತದಾನ ಮಾಡಿದ್ದಾರೆ.

ಅವರ ನಿರೀಕ್ಷೆಯನ್ನು ಹುಸಿ ಮಾಡದಂತೆ ಕಾರ್ಯನಿರ್ವಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ೧ನೇ ಏಪ್ರೀಲ್ ೨೦೦೬ರ ನಂತರ ನೇಮಕಗೊಂಡ ಸರಕಾರಿ ನೌಕರರಿಗೆ ಮರಣ ಶಾಸನವಾಗಿರುವ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಮೊದಲ ಅಂಶ ಸೇರಿದಂತೆ ಸರಕಾರಿ ನೌಕರರ ಹಾಗೂ ಶಿಕ್ಷಕರ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವ ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತದೆ ಅಲ್ಲದೇ ನೌಕರರ ನ್ಯಾಯುತವಾದ ಬೇಡಿಕೆಗಳ ಈಡೇರಿಕೆಗಾಗಿಯು ಸತತ ಪರಿಶ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರ ಎಂ.ಡಿ.ಗುಲಾಮ ಹುಸೇನ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ವಿರುಪಾಕ್ಷಪ್ಪ ಬಾಗೋಡಿ, ಶಿಕ್ಷಕ ಆಭೀದ ಹುಸೇನ ಅತ್ತಾರ, ಕಾಶಿನಾಥ ಸಿರಿಗೇರಿ, ಮಲ್ಲಿಕಾರ್ಜುನ ಹ್ಯಾಟಿ, ನಾಗಪ್ಪ ನರಿ, ಭಾರತಿ ಆಡೂರು, ಶೀಲಾ ಬಂಡಿ, ಜಯಶ್ರೀ ದೇಸಾಯಿ, ಗೌಸೀಯಾಬೇಗಂ, ಶ್ರೀದೇವಿ ಕುಲಕರ್ಣಿ, ನಾಸೀರ ಹುಸೇನ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!