
ಐಎಎಸ್, ಕೆಎಎಸ್ ಪೂರ್ವಭಾವಿ ಪ್ರವೇಶ ಪರೀಕ್ಷೆ : ನಿಷೇದಾಜ್ಞೆ ಜಾರಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 3- ಅಕ್ಟೋಬರ್ 06ರಂದು ವಿಜಯನಗರ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸುವ ಐಎಎಸ್, ಕೆಎಎಸ್ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಸಂಬAಧ ಪರೀಕ್ಷಾ ಕೇಂದ್ರ ಸುತ್ತ-ಮುತ್ತ ೨೦೦ ಮೀಟರ್ ವ್ಯಾಪ್ತಿಯೊಳಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ೧೦ ತಿಂಗಳ ವಸತಿ ಸಹಿತ ಐವಿಎಸ್ ಮತ್ತು ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಘೋಷಿಸಿರುತ್ತಾರೆ. ಈ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಅ.೦೬ರಂದು ಬೆಳಿಗ್ಗೆ ೧೦ ರಿಂದ ೧೨.೩೦ ಗಂಟೆಯವರೆಗೆ ಹಾಗೂ ಮಧ್ಯಾಹ್ನ ೦೨ ರಿಂದ ೨.೪೫ ಗಂಟೆವರೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಂಬುನಾಥ ಹಳ್ಳಿಯ “ಡಾ ಎ.ಪಿ.ಜೆ ಅಬ್ದುಲ ಕಲಾಂ, ಮಾದರಿ ವಸತಿ ಶಾಲೆ, ಈ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಈ ಪರೀಕ್ಷೆಯಲ್ಲಿ ಯಾವುದೇ ರೀತಿಯ ಗೊಂದಲ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ನಿಯಮಗಳನುಸಾರ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಿಕೊಂಡು ಹೋಗಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ರ ಪ್ರಕರಣ(ಸೆಕ್ಷನ್)೧೬೩ ರನ್ವಯ ಪರೀಕ್ಷಾ ಕೇಂದ್ರ ಸುತ್ತಮುತ್ತ ೨೦೦ ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸಿದೆ.
ಈ ಪರೀಕ್ಷಾ ಕೇಂದ್ರ ಪ್ರದೇಶದಲ್ಲಿ ಪರೀಕ್ಷಾರ್ಥಿಗಳಲ್ಲದ, ಪರೀಕ್ಷಾ ಉಸ್ತುವಾರಿ ಇಲ್ಲದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಅಥವಾ ಯಾವುದೇ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರೆಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.