2c136fae-be38-4577-97e1-318669006cc9

ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ : ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 24- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ವಲಸೆ ಕುರಿಗಾಹಿಗಳಿಗೆ ಗುರಿತಿನ ಚೀಟಿ ನೀಡಲು ಆರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಲಾಗಿದೆ.

ಅರ್ಜಿ ಸಲ್ಲಿಸುವ ಅರ್ಜಿದಾರರು ಕನಿಷ್ಠ ೨೦ ಕುರಿಗಳನ್ನು ಹೊಂದಿರಬೇಕು. ನಿಗದಿಪಡಿಸಿದ ಅರ್ಜಿ ನಮೂನೆಯನ್ನು ತಮ್ಮ ವ್ಯಾಪ್ತಿಯ ಪಶುಆಸ್ಪತ್ರೆ ಅಥವಾ ಹೊಸಪೇಟೆ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಾಖಲೆಯೊಂದಿಗೆ ಸಲ್ಲಿಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ತಾಲೂಕಿನ ಪಶು ಆಸ್ಪತ್ರೆ ಆವರಣದಲ್ಲಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂ.ಸಂ: ೦೮೩೯೪೨೨೫೧೨೯ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಹುಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!