WhatsApp Image 2024-10-08 at 4.07.20 PM

ಮನೆಯ ಸುತ್ತಲು ಸಮಸ್ಯೆಗಳು ಏದುರಾದರೆ ಪೊಲೀಸರನ್ನು ಸಂಪರ್ಕಿಸಿ : ಕವಿತಾ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 8- ಕುಟುಂಬದಲ್ಲಿ ಅಥವಾ ಸುತ್ತಮುತ್ತ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಪೊಲೀಸ್ ಠಾಣೆಯ ಸಹಾಯ ಪಡೆಯುವ ಮುಖಾಂತರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬಹುದು ಎಂದು ಕೊಪ್ಪಳ ಮಹಿಳಾ ನಗರಠಾಣೆಯ ಹೆಡ್ ಕಾನ್ಸೆಟೆಬಲ್ ಕವಿತಾ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಪ್ಪಳದ ಕುಂಬಾರ ಓಣಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದಲ್ಲಿ ಮಹಿಳೆಯರಿಗೆ ಮಾಹಿತಿ ನೀಡಿದರು.

ಅತಿಥಿಗಳಾಗಿ ಶರಣಪ್ಪ ಬಾಚಲಾಪುರ ಆಗಮಿಸಿ ಮಹಿಳೆಯರು ಮನೆಯ ವಾತಾವರಣವನ್ನು ಉತ್ತಮವಾಗಿಟ್ಟುಕೊಳ್ಳುವ ಜೊತೆಗೆ ಆರ್ಥಿಕವಾಗಿ ಸಬಲರಾಗಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರಣವಾಗಿದೆ ಎಂದು ಶುಭ ಹಾರೈಸಿದರು. ತಾಲೂಕಿನ ಯೋಜನಾಧಿಕಾರಿ ಜಗದೀಶ ಮಾತನಾಡಿ ಕೇಂದ್ರ ಕಚೇರಿಯ ಮುಖಾಂತರ ಸದಸ್ಯರು ಎಲ್ಲಾ ರೀತಿಯ ಮಾಹಿತಿ ಸಲಹೆಗಳನ್ನು ಪಡೆದುಕೊಂಡು ಕ್ರಿಯಾಶೀಲರಾಗಿದ್ದಾರೆ. ಉತ್ತಮ ಅವಕಾಶವನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢವಾಗಲು ಹೊರಟಿರುವುದು ತುಂಬಾ ಸಂತಸದ ವಿಷಯ ಎಂದು ತಿಳಿಸಿದರು.

ಅಂಗನವಾಡಿ ಶಿಕ್ಷಕರಾದ ಶ್ರೀಮತಿ ಅಕ್ಕಮಹಾದೇವಿ ಇದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಈರಮ್ಮ ವಹಿಸಿದ್ದರು.. ಸೇವಾ ಪ್ರತಿನಿಧಿ ಪಾರ್ವತಿ ಹಾಗೂ ಎಲ್ಲಾ ಸದಸ್ಯರು ಆಸಕ್ತಿಯಿಂದ ಪಾಲ್ಗೊಂಡಿದ್ದು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!