ಕುಡಿಯುವ ನೀರನ್ನು ಪ್ರಯೋಗಾಲಯಗಳ ಮೂಲಕ ಪರೀಕ್ಷಿಸಿ ಶುದ್ಧ ನೀರನ್ನು ಒದಗಿಸಲು ಸೂಚನೆ

ಕರುನಾಡ ಬೆಳಗು ಸುದ್ದಿ

ವಿಜಯನಗರ, 30- ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಹಾಗೂ ಸುರಕ್ಷಿತ ನೀರನ್ನು ಸರಬರಾಜು ಮಾಡುವ ಪೂರ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಯೋಗಾಲಯಗಳ ಮೂಲಕ ನೀರಿನ ಪರೀಕ್ಷೆ ನಡೆಸಿ ಖಚಿತಪಡಿಸಿಕೊಂಡು ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ತಿಳಿಸಿದರು.

ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ನಡೆದ ನೀರಿನ ಗುಣಮಟ್ಟ ಮತ್ತು ಮೇಲ್ವಿಚಾರಣಾ ಜಿಲ್ಲಾ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಡಿಯಲು ಸರಬರಾಜು ಮಾಡುವ ನೀರಿನ ಪ್ರಮಾಣಿತ ಗುಣಮಟ್ಟವನ್ನು ಪ್ರಾಥಮಿಕ ಹಂತದಲ್ಲಿ ಸಂಭಾವ್ಯ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಎಫ್‌ಟಿಕೆ ಮತ್ತು ಹೆಚ್‌ಎಸ್ ವೈಲ್ಸ್ ಕಿಟ್‌ಗಳನ್ನು ಸರಬರಾಜು ಮಾಡಲಾಗಿದ್ದು, ನೀರಿನ ಮೂಲಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿ ನಿಯಮಿತ ಪರೀಕ್ಷೆಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯ ಸಭೆಯನ್ನು ಹಮ್ಮಿಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯ ಜಿಲ್ಲಾ ಆರೋಗ್ಯಾಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಲಾಖೆ, ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಹಾಗೂ ಎಇಇ, ಎಇ, ಡಿಟಿಎಸ್ ಯುವ್, ಡಿಪಿಎಮ್ ಸಿಬ್ಬಂದಿವರ್ಗದವರು ಭಾಗವಸಿದ್ದರು.

Leave a Reply

Your email address will not be published. Required fields are marked *

error: Content is protected !!