
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
ಮಕ್ಕಳಿಗೆ ಯೋಗ್ಯ, ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲ್ಲರ ಕರ್ತವ್ಯ : ಡಿಸಿ ನಲಿನ್ ಅತುಲ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 1- ಕೇವಲ ಕಟ್ಟಡ, ರಸ್ತೆ, ಚರಂಡಿ, ಶೌಚಾಲಯಗಳನ್ನು ಕಟ್ಟುವುದು ಮಾತ್ರವಲ್ಲದೆ, ಮಕ್ಕಳಿಗಾಗಿ ಯೋಗ್ಯ ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆಗಸ್ಟ್ 01 ರಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಕ್ಕಳ ರಕ್ಷಣೆಯ ಭಾಗೀದಾರ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ಆಯೋಜಿಸಲಾಗಿದ್ದ “ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಮತ್ತು ಮಿಷನ್ ವಾತ್ಸಲ್ಯ” ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರದ ಆದೇಶದನ್ವಯ ಪ್ರತಿ ಸ್ಥಳೀಯ ಸರಕಾರಗಳು ತಮ್ಮ ಅನುದಾನದಲ್ಲಿ ಕನಿಷ್ಠ ಶೇ.5 ಅನುದಾನವನ್ನು ಮಕ್ಕಳಿಗಾಗಿ, ಮಕ್ಕಳ ರಕ್ಷಣೆಗಾಗಿ ಮೀಸಲಿಟ್ಟು, ಮಕ್ಕಳ ಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಿ. ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ-2016ರನ್ವಯ ದಿನಾಂಕ: 03.03.2018ರ ನಂತರದಲ್ಲಿ ರಾಜ್ಯದಲ್ಲಿ ಜರುಗುವ ಎಲ್ಲಾ ಬಾಲ್ಯವಿವಾಹಗಳು ಅಸಿಂಧು ವಿವಾಹಗಳಾಗಿವೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು “ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಅತ್ಯಾಚಾರವೆಂದು” ಆದೇಶಿಸಿದೆ. ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿದ್ದು, ಅದರ ಭಾಗವಾಗಿ ಗ್ರಾಮ ಮಟ್ಟ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳು ಕಾರ್ಯ ಪ್ರವೃತ್ತರಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಬಾಲ್ಯವಿವಾಹವನ್ನು ಮಾಡಲು ಪ್ರಯತ್ನಿಸಿದವರ, ತಯಾರಿ ಮಾಡಿದವರ ಹಾಗೂ ಅದಕ್ಕೆ ಪ್ರಚೋದನೆ ನೀಡಿದವರ ವಿರುದ್ಧವೂ ಸಂಬAಧಿಸಿದ ಪೊಲೀಸ್ ಠಾಣೆಯಲ್ಲಿ ಕಡ್ಡಾಯವಾಗಿ ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದರು.
ಅನಾಥ, ಪರಿತ್ಯಕ್ತ, ಲೈಂಗಿಕ ಹಲ್ಲೆ, ದೌರ್ಜನ್ಯ ಅಥವಾ ಕಿರುಕುಳಕ್ಕೆ ಒಳಗಾದ, ಬೀದಿಬದಿಯಲ್ಲಿ ವಾಸವಿರುವ, ಬಾಲಕಾರ್ಮಿಕ ಮಕ್ಕಳಿಗೆ ಪೋಷಣೆ ಮತ್ತು ರಕ್ಷಣೆಗಾಗಿ ಹಾಗೂ ಸಂಕಷ್ಟಕರ ಪರಿಸ್ಥಿತಿಯಲ್ಲಿರುವ ಮಕ್ಕಳ ರಕ್ಷಣೆಗಾಗಿ ಮಿಷನ್ ವಾತ್ಸಲ್ಯವು ಜಾರಿಯಲ್ಲಿದೆ. ಈ ಮೇಲ್ಕಾಣಿಸಿದ ಯಾವುದೇ ರೀತಿಯ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098 / 112 ಗೆ ಉಚಿತ ದೂರವಾಣಿ ಕರೆಯನ್ನು ಮಾಡಿ ಮಾಹಿತಿಯನ್ನು ನೀಡಬಹುದಾಗಿದೆ, ಈ ಕುರಿತು ನಿಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವುದರೊಂದಿಗೆ, ತುರ್ತು ಸಹಾಯಕ್ಕಾಗಿ ದಾಖಲಾದ ದೂರವಾಣಿ ಕರೆಗಳ ಬಗ್ಗೆ ಮಾಹಿತಿಯನ್ನು ಮಕ್ಕಳ ಸಹಾಯವಾಣಿಯಿಂದ ನೀಡಿದಾಗ ತಪ್ಪದೇ ಸ್ಪಂದಿಸಿ ಕಾರ್ಯಪ್ರವೃತ್ತರಾಗಿ ಎಂದು ತಿಳಿಸಿದರು.
ಮಿಷನ್ ವಾತ್ಸಲ್ಯ ಯೋಜನೆಯಡಿಯಲ್ಲಿ ಗ್ರಾಮ, ವಾರ್ಡ, ನಗರ/ಪಟ್ಟಣ, ಗ್ರಾಮ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ “ಮಕ್ಕಳ ರಕ್ಷಣಾ ಸಮಿತಿ”ಗಳನ್ನು ರಚಿಸಿ ಅನುಷ್ಠಾನಗೊಳಿಸಿದ್ದು, ಈ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಸಂಕಷ್ಟಕರ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸುವುದು ಅವಶ್ಯಕವಾಗಿದೆ. ಆದ್ದರಿಂದ ನಿಮ್ಮ ವ್ಯಾಪ್ತಿಯಲ್ಲಿ ಬರುವ ವಿವಿಧ ಸಮಿತಿಗಳ ಸಮನ್ವಯತೆಯನ್ನು ಸಾಧಿಸಿ, ಮೇಲ್ವಿಚಾರಣೆಯನ್ನು ಮಾಡುವುದರ ಮೂಲಕ ಮಕ್ಕಳ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪುಜಾರ ಅವರು ಮಾತನಾಡಿ, ಮಿಷನ್ ವಾತ್ಸಲ್ಯ ಯೋಜನೆಯು ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ಪುನರವಸತಿಗಾಗಿ ಜಾರಿಯಲ್ಲಿರುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಧೇಯ್ಯ ವಾಕ್ಯವೇ “ಯಾವುದೇ ಮಗುವನ್ನು ಹಿಂದುಳಿಯಲು ಬಿಡಬೇಡಿ” ಎಂಬುದಾಗಿದೆ. ಯಾವುದೇ ಮಗುವು ಅದರ ಹಕ್ಕುಗಳಿಂದ ವಂಚಿತರಾಗದAತೆ ನೋಡಿಕೊಳ್ಳಬೇಕಾಗಿರುವುದು ನಮ್ಮೆಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ನಿಲೋಫರ್ ಎಸ್.ರಾಂಪುರಿ, ನಿರೂಪಣಾಧಿಕಾರಿ ಗಂಗಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಡಾ. ಕೆ.ರಾಘವೇಂದ್ರ ಭಟ್, ಪ್ರಾದೇಶಿಕ ಸಂಯೋಜಕರು, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಮತ್ತು ಹರೀಶ್ ಜೋಗಿ, ವ್ಯವಸ್ಥಾಪಕರು, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಡಾ. ಸುಮಲತಾ ಆಕಳವಾಡಿ, ಇಮಾಮ್‌ಸಾಬ್ ಸದಾಫ್, ತಹಶೀಲ್ದಾರರು, ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ನಗರಸಭೆ/ಪುರಸಭೆ/ಪಟ್ಟಣ ಪಂಚಾಯತ್‌ಗಳ ಪೌರಾಯುಕ್ತರು/ಮುಖ್ಯಾಧಿಕಾರಿಗಳು ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರುಗಳು ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098ರ ಸಿಬ್ಬಂದಿಗಳು ಭಾಗವಹಿಸಿದ್ದರು.