KB

ವೆಂಕಟಗಿರಿ : 12 ರಂದು ಜನಸ್ಪಂದನ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 9- ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮವು ನವೆಂಬರ್ ೧೨ರಂದು ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿನ ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ “ಜನ ಸ್ಪಂದನಾ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲು ತಿಳಿಸಿದಂತೆ, “ಜನ ಸ್ಪಂದನಾ” ಕಾರ್ಯಕ್ರಮವನ್ನು ನ.೧೨ರ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆವರೆಗೆ ವೆಂಕಟಗಿರಿ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿರುತ್ತದೆ.

ಈ “ಜನ ಸ್ಪಂದನಾ” ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!