
ಉಪಚುನಾವಣೆಗಳ ಪ್ರಚಾರದಲ್ಲಿ ಭಾಗವಹಿಸಲಿರುವ ಜೆಡಿಎಸ್ ನಾಯಕರು
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 25- ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಶ್ರೀ ಸಿವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ನಿನ್ನೆ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವವಾದ ಸಭೆ ನಡೆಯಿತು. ಈ ಸಭೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳ ಗೆಲುವಿಗೆ ಮಾಡಬೇಕಾದ ಕೆಲಸಗಳ ಬಗ್ಗೆ ಸಮಗ್ರವಾದ ಚರ್ಚೆ ನಡೆಯಿತು. ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಮಾಡಬೇಕಾದ ಕೆಲಸಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ರಾಜ್ಯ ನಾಯಕರ ಅಪೇಕ್ಷೆಯ ಮೇರೆಗೆ ಕೊಪ್ಪಳದಿಂದ ನಾಯಕರು ಮೂರು ಕ್ಷೇತ್ರಗಳಲ್ಲಿ ವ್ಯಾಪಕವಾದ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕ್ಷೇತ್ರಗಳಲ್ಲಿ ಎರಡು ಪಕ್ಷಗಳ ಮತಗಳು ವಿಲೀನಗೊಂಡರೆ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳ ಗೆಲುವು ಗೋಡೆ ಬರಹದಷ್ಟು ಸ್ಪಷ್ಟ. ಮತದಾರರು ರಾಜ್ಯ ಸರಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ರೋಸಿ ಹೋಗಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಕಾರ್ಯಕ್ರಮಕ್ಕೆ ಬೇಕಾದ ಕೆಲಸಗಳ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.