
ಕೊಪ್ಪಳ : 28 ರಂದು ಉದ್ಯೋಗ ಮೇಳ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 25- ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳವು ಸೆಪ್ಟೆಂಬರ್ ೨೮ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ರವರೆಗೆ ನಗರದ ಅಶೋಕ ಸರ್ಕಲ್ ಬಳಿ ಇರುವ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಬಿಇ ಹಾಗೂ ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ೧೮ ರಿಂದ ೩೫ ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ ಅಥವಾ ಮೊಬೈಲ್ ಸಂಖ್ಯೆ ೯೧೪೮೭೯೨೮೮೮, ೯೧೪೮೭೯೩೮೮೮, ೯೧೪೮೮೭೫೮೮೮, ೯೪೮೦೮೧೨೧೩೮ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.