
ಕಬ್ಬಡ್ಡಿ ಪಂದ್ಯಾವಳಿ : ಪ್ರೌಢಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ
ಕರುನಾಡ ಬೆಳಗು ಸುದ್ದಿ
ಕುಕನೂರು, 5- ತಾಲೂಕಿನ ಬಿನ್ನಾಳ ಗ್ರಾಮದ ಶ್ರೀ ಜಗದ್ಗುರು ಮುರಘ ರಾಜೇಂದ್ರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೊಪ್ಪಳದ ಜಿಲ್ಲಾ ಕ್ರಿಂಡಾ0ಗಣದಲ್ಲಿ ಅ.೪ ರಂದು ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಕುಷ್ಟಗಿ ತಾಲೂಕಿನ ಹನಮನಾಳ ಪ್ರೌಢ ಶಾಲಾ ವಿದ್ಯಾರ್ಥಿನಿಯರನ್ನ ಸೂಲಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಶಿಕ್ಷಕರು, ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿ ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.