8

ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ‍್ಯ ಸಿಗಲು ಕಾರಣೀಭೂತರು ಪಟೇಲರು : ರಾಘವೇಂದ್ರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 17- ತಾ.ಪಂ ಕಛೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಆಚರಿಸಲಾಯಿತು.

ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕು ೧೩ ತಿಂಗಳು ಎರೆಡು ದಿನ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ‍್ಯ ಸಿಕ್ಕಿದ್ದು, ಇದಕ್ಕೆ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರು ಪಾತ್ರ ಪ್ರಮುಖವಾಗಿದೆ ಎಂದು ತಾ.ಪಂ ಯೋಜನಾಧಿಕಾರಿ ರಾಘವೇಂದ್ರ ಅವರು ಹೇಳಿದರು.

ತಾಲೂಕು ಪಂಚಾಯತ ಆವರಣದಲ್ಲಿ ಆಯೋಜಿಸಲಾದ ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಜನರು ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದರೇ, ನಂತರ ನಮ್ಮದೇ ದೇಶದ ಹೈದರಾಬಾದ್ ನಿಜಾಮನ ವಿರುದ್ಧ ಹೋರಾಡಿ ಸ್ವಾತಂತ್ರ‍್ಯ ಪಡೆಯಬೇಕಾಯಿತು.

ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕರು ಕೂಡಾ ಕಲ್ಯಾಣ ಕರ್ನಾಟಕಕ್ಕೆ ಮತ್ತು ಹೈದರಾಬಾದ್ ನಿಜಾಮನ ಆಳ್ವಿಕೆಯಲ್ಲಿದ್ದ ಪ್ರದೇಶದ ಜನರಿಗೆ ಮಾತ್ರ ಸ್ವಾತಂತ್ರ‍್ಯ ಸಿಕ್ಕಿರಲಿಲ್ಲ. ಅದು ಸಿಕ್ಕಿದ್ದು ಸೆಪ್ಟೆಂಬರ್-೧೭ ೧೯೪೮ ರಂದು. ಹೀಗಾಗಿ ಸೆಪ್ಟೆಂಬರ್ ೧೭ ಅನ್ನು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ.

ನಂತರ ತಾ.ಪಂ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಶ್ರೀ ಗುರು ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಈ ವೇಳೆ ತಾ.ಪಂ ಸಹಾಯಕ ನಿರ್ದೇಶಕರಾದ ವೈ.ವನಜಾ, ಕೆಡಿಪಿ ನಾಮನಿರ್ದೇಶಿತ ಸದಸ್ಯರು, ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷರು, ಸದಸ್ಯರು, ತಾ.ಪಂ ವಿವಿಧ ಯೋಜನೆಗಳ ವಿಷಯ ನಿರ್ವಾಹಕರಾದ ದುರಗಪ್ಪ ಭಜಂತ್ರಿ, ಮಹಮ್ಮದ್ ಅಜೀಜ್, ಮಂಜುನಾಥ ಭಜಂತ್ರಿ, ಶಿವರಾಜ್, ನರೇಗಾ ಹಾಗೂ ತಾ.ಪಂ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!