
ಕನ್ನಡ ರಾಜ್ಯೋತ್ಸವ : ಕನ್ನಡ ಧ್ವಜಾರೋಹಣ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 27- ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ಅಂದು ಕೊಪ್ಪಳದ ಸಾಹಿತ್ಯ ಭವನದ ಆವರಣದಲ್ಲಿ ಬೆಳಿಗ್ಗೆ 7:30 ಗಂಟೆಗೆ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪೋಲೀಸ್ ಪಾಟೀಲ್ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸುವರು.
ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾ, ತಾಲೂಕು ಘಟಕದ ಸರ್ವ ಪದಾಧಿಕಾರಿಗಳು, ಆಜೀವ ಸದಸ್ಯರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಾಹಿತಿಗಳು, ಸಾಹಿತ್ಯಾಸಕ್ತರು, ಅಭಿಮಾನಿಗಳು ಆಗಮಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕಾ ಘಟಕದ ಕಾರ್ಯದರ್ಶಿ ಬಸವರಾಜ ಶಿರಗುಂಪಿ ಶೆಟ್ಟರ್ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊ0ಡಿದ್ದಾರೆ.