
ಜ್ಞಾನ ವಿಕಾಸ ಕಾರ್ಯಕ್ರಮ : ಉಚಿತವಾಗಿ ಹೊಲಿಗೆ ತರಬೇತಿ ಶಿಬಿರ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 19- ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳುಗಳ ಕಾಲ ಉಚಿತವಾಗಿ ಹೊಲಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಯೋಜನಾಧಿಕಾರಿ ಕೆಎಚ್ ಇವರು ಉದ್ಘಾಟಿಸಿ ಮಹಿಳೆಯರು ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುವುದಲ್ಲದೆ ಚಿಕ್ಕ ಚಿಕ್ಕ ಸ್ವಉದ್ಯೋಗ ಆರಂಭಿಸುವ ಮುಖಾಂತರ ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಊರಿನ ಗಣ್ಯರಾದ ಇಮಾಮ್ ಸಾಹೇಬರು ಕಾರ್ಯಕ್ರಮದ ಕುರಿತು ಶುಭ ನುಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸೇವಾ ಪ್ರತಿನಿಧಿ ರಾಜೇಶ್ವರಿ ಕವಿತಾ ಉಪಸ್ಥಿತರಿದ್ದು ಕೇಂದ್ರದ ಸದಸ್ಯರು ಆಸಕ್ತಿಯಿಂದ ಪಾಲ್ಗೊಂಡಿದ್ದರು.