
ಕೊಪ್ಪಳ ವಿವಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 25- 2024-25೨೫ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರ ಗಂಗಾವತಿ ಮತ್ತು ಯಲಬುರ್ಗಾದಲ್ಲಿ ಸ್ನಾತಕೋತ್ತರ ಪದವಿಯ ವಿವಿಧ ಅಧ್ಯಯನ ವಿಭಾಗಗಳಲ್ಲಿ ಅಗತ್ಯತೆಗನುಸಾರ ಬೋಧನಾ ಕಾರ್ಯದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ ತಿತಿತಿ.ಞoಠಿಠಿಚಿಟuಟಿiveಡಿsiಣಥಿ.ಚಿಛಿ.iಟಿ ಕ್ಕೆ ಭೇಟಿ ನೀಡಬಹುದು ಎಂದು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.