
ವಿದ್ಯಾರ್ಥಿಗಳ ಜೀವನದಲ್ಲಿ ಪಠ್ಯ-ಪಠ್ಯೇತರ ಚಟುವಟಿಕೆ ಮುಖ್ಯ : ಕೊಟ್ರೇಶ್
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 23- ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಕೊಟ್ರೇಶ್ ಪೋಷಕರಿಗೆ ಸಲಹೆ ನೀಡಿದರು.
ಸಿರುಗುಪ್ಪ ನಗರದ ವಿಜಯ ಮೇರಿ ಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯ ಮೇರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಸಹಭಾಗಿತ್ವದಲ್ಲಿ ಜರುಗಿದ ಜಿಲ್ಲಾಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಥ್ರೋ ಬಾಲ್ ಪಂದ್ಯಾವಳಿಗೆ ಅವರು ಚಾಲನೆ ನೀಡಿ ಮಾತನಾಡಿದರು.
ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗುರಪ್ಪ, ನಿವೃತ್ತ ಟಿಪಿಓ ಗಾದಿಲಿಂಗನಗೌಡ, ದೈಹಿಕ ಶಿಕ್ಷಕರ ಸಂಘದ ಗ್ರೇಡ್-೨ ರಾಜ್ಯ ಉಪಾಧ್ಯಕ್ಷ ಈರಣ್ಣ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಚನ್ನಪ್ಪ, ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ತಾಲೂಕು ದೈಹಿಕ ಪರಿವೀಕ್ಷಕ ರಮೇಶ್, ವಿಜಯ, ಮೇರಿ ಶಾಲೆ ಮುಖ್ಯ ಆಡಳಿತಾಧಿಕಾರಿ ಸಿಸ್ಟರ್ ಲೂರ್ದು, ಮೇರಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ತಮ್ಮನ ಗೌಡ ಪಾಟೀಲ್, ದೈಹಿಕ ಶಿಕ್ಷಕ ಅಜ್ಮೀರ್, ಉಪೇಂದ್ರ ವೈ.ಡಿ, ವೆಂಕಟೇಶ್, ಉಸ್ಮಾನ್, ಎಸ್.ಕಿರಣ್, ವೈ.ಚಿದಾನಂದ, ವೈ.ಡಿ.ಮಂಜುನಾಥ, ನಾಗರಾಜ ಇತರರಿದ್ದರು.