
ರಾಷ್ಟಿಯ ಕಾನೂನು ಸೇವೆಗಳ ದಿನಾಚರಣೆ ಉದ್ಘಾಟನೆಗೆ ಚಾಲನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 10- ತಾಲೂಕಿನ ಕಿನ್ನಾಳ ಗ್ರಾಮದ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ, ಸರಕಾರಿ ಪ್ರೌಢಶಾಲೆ ಕಿನ್ನಾಳ, ಜಿಲ್ಲಾ ವಕೀಲರ ಸಂಘ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ ೯ರ ಶನಿವಾರದಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮ ಜರುಗಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಅಧ್ಯಕ್ಷರಾಗಿರುವ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರ್ ಅವರು ಉದ್ಘಾಟನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಾನೂನು ಸೇವೆಗಳ ಪ್ರಾಧಿಕಾರ ದಿಂದ ಸಾರ್ವಜನಿಕರಿಗೆ ಕಾನೂನು ಸೇವೆಗಳ ಸೌಲಭ್ಯ ಪಡೆದುಕೊಳ್ಳಬಹುದು ಇಂತಹ ಕಾರ್ಯಕ್ರಮ ಗಳ ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಅವರು ಸಲಹೆ ನೀಡಿದರು.
ಸಮಾರಂಭದಲ್ಲಿ ಕಿನ್ನಾಳ ಗ್ರಾಮದ ಸರಕಾರಿ ಸoಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಾಸುದೇವ ಆಡಬಾವಿ, ಕಿನ್ನಾಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕರಿಯಮ್ಮ ಉಪ್ಪಾರ್ ಸರಕಾರಿ ಪ್ರೌಢ ಶಾಲೆಯ ಉಪಪ್ರಚಾರ್ಯ ಶ್ರೀಮತಿ ಕಸ್ತೂರಿ ಕಡೆಮನಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರಯ್ಯ ತೆಳೆಗಡೆ ಮಠ, ಎಸ್‌ಡಿಎಂಸಿ ಅಧ್ಯಕ್ಷ ಪರಶುರಾಮ್ ಎಲೆಡಿಕಿ, ಉಪಾಧ್ಯಕ್ಷರಾದ ಶ್ರೀಮತಿ ಸುಮ ಲತಾ ಸಜ್ಜನ್, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ್ ಕುಲಕರ್ಣಿ ಮತ್ತು ಸಣೆಪ್ಪ ಕಾರಬ್ಯಾಳಿ ಸೇರಿದಂತೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸರ್ವ ಸದಸ್ಯರು ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು.