2c136fae-be38-4577-97e1-318669006cc9

ಚಾಲಕರಿಗೆ ಮತ್ತು ನಿರ್ವಾಹಕರಿಗೆ ಇಂದು ಕಾನೂನು ಅರಿವು ನೆರವು ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ವಿಜಯನಗರ, 31- ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟಂಬರ್ 1 ರಂದು ಸಂಜೆ 6 ಗಂಟೆಗೆ ಹೊಸಪೇಟೆಯ ಕೆ.ಎಸ್.ಆರ್.ಟಿ.ಸಿ ಘಟಕದಲ್ಲಿ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಲಿದೆ.

ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ .ಎ.ನಂದಗಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ತಿಮ್ಮಾರೆಡ್ಡಿ ಹೀರಾ ಇವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೊಸಪೇಟೆಯ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಲತಾ. ಬಿ. ಹುಲ್ಲೂರ, ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್. ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ್, ಅಪರ ಸಿವಿಲ್ ನ್ಯಾಯಾಧೀಶರಾದ ಆಶೋಕ ಆರ್ ಹೆಚ್, ವಕೀಲರ ಸಂಘದ ಅಧ್ಯಕ್ಷರಾದ ಕೆ. ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ. ಶ್ರೀನಿವಾಸಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು ಬಿ.ಎಲ್, ಆರ್.ಟಿ.ಓ ವಸಂತ ಚೌವ್ಹಣ್, ತಾಲೂಕು ಆರೋಗ್ಯಧಿಕಾರಿ ಡಾ.ಬಾಸ್ಕರ್, ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಲಕನ್ ಆರ್ ಮಸುಗುಪ್ಪಿ, ವಿ.ತಾಂ ಅಭಿಯಂತರರಾದ ದಾಸರಿ ರಾಧಕೃಷ್ಣ, ವಿ.ಸಂ ಅಧಿಕಾರಿ ರಾಜಶೇಖರ ವಾಜಂತ್ರಿ, ಕೆ.ಎಸ್.ಆರ್.ಟಿ.ಸಿ ಕಾನೂನು ಸಲಹೆಗಾರರಾದ ಕೆ.ಎಂ.ಶಿವಕುಮಾರ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಇವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!