4

ಹಿರಿಯ ನಾಗರಿಕರಿಗೆ ಕಾನೂನು ಅರಿವು ನೆರವು ಕಾರ್ಯಗಾರ
ಹಿರಿಯ ನಾಗರಿಕರಿಗೆ ತೊಂದರೆಯಾಗದ0ತೆ ನೋಡಿಕೊಳ್ಳಿ : ಮಾಂತೇಶ್ ದರಗದ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 23- ಹಿರಿಯ ನಾಗರಿಕರಿಗೆ ತೊಂದರೆಯಾಗದ0ತೆ ನೋಡಿಕೊಳ್ಳಿ ಎಂದು ಕೊಪ್ಪಳದ ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್ ಧರಗದ್ ಹೇಳಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಹಿರಿಯ ನಾಗರಿಕರಿಗೆ ಕಾನೂನು ಸೇವೆಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರಿಗೆ ಯಾವುದೇ ರೀತಿ ತೊಂದರೆಯಾಗದ0ತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಆದ್ದರಿಂದ ಹಿರಿಯ ನಾಗರಿಕರಿಗೆ ಏನಾದರೂ ಸಮಸ್ಯೆ ಆದರೆ ನಮ್ಮ ಜಿಲ್ಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಮಟ್ಟದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಇದೆ. ಹಿರಿಯ ನಾಗರಿಕರಿಗೆ ಏನಾದರು ಸಮಸ್ಯೆ ಇದ್ದರೆ, ಇಲ್ಲಿಗೆ ಬಂದು ಭೇಟಿಯಾಗಿ ನಿಮ್ಮ ಸಮಸ್ಯೆಗಳನ್ನು ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ ವಹಿಸಿದ್ದರು.

ಈ ಸಂದರ್ಭದಲ್ಲಿ ಕೊಪ್ಪಳ ತಾ.ಪಂ ಯೋಜನಾಧಿಕಾರಿ ಆರ್.ಎಚ್.ನದಾಫ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ವೆಂಕಟೇಶ್ ದೇಶಪಾಂಡೆ ಸೇರಿದಂತೆ ಇಲಾಖೆ ಸಿಬ್ಬಂದಿಗಳು, ವಿಕಲಚೇತನರು ಹಾಗೂ ಹಿರಿಯನಾಗರಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!