
ಜಿಲ್ಲೆಯ ಎಲ್ಲ ಮಕ್ಕಳಿಗೂ ಸಮರ್ಪಕ ಲಸಿಕೆಗಳು ಸಿಗುವಂತಾಗಲಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 8- ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದ0ತೆ ನಿಗಾವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮಹಮ್ಮದ್‌ಅಲಿ ಅಕ್ರಂ ಷಾ ಅವರು ಹೇಳಿದರು.
ಜಿಲ್ಲಾ ಪಂಚಾಯತಿ ಸಿಇಓ ಕಚೇರಿಯಲ್ಲಿ ನಡೆದ ರಾಷ್ಟಿçÃಯ ಬಾಲಸ್ವಾಸ್ಥ ಕಾರ್ಯಕ್ರಮ, ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮದ ಅಂತರ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಲಸಿಕೆಗಳನ್ನು ಒದಗಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಶೇ.೧೦೦ ರಷ್ಟು ಹಾಜರಾತಿ ಇರುವಂತೆ ಮುಂಜಾಗೃತೆ ವಹಿಸಬೇಕು. ಲಸಿಕೆಯಿಂದ ವಂಚಿತರಾದ ಮಕ್ಕಳನ್ನು ಸರ್ವೇ ಮೂಲಕ ಪತ್ತೆ ಹಚ್ಚಿ ಅಭಿಯಾನದ ಮಾದರಿಯಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯವಾಗಬೇಕು. ಅಶಾ ಕಾರ್ಯಕರ್ತೆಯರ ಕೊರತೆಯಿದ್ದಲ್ಲಿ, ಆಯಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಜತೆಗೂಡಿ ಲಸಿಕೆ ವಿತರಣೆಗೆ ಕೈಜೋಡಿಸಬೇಕು. ಲಸಿಕೆ ಕೊರತೆಯಿಂದ ನ್ಯೂನತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಸೂಕ್ತ ಕ್ರಮವಹಿಸಬೇಕು.
ಎಲ್ಲಾ ಮಕ್ಕಳಿಗೆ ಸಮರ್ಪಕವಾಗಿ ಲಸಿಕೆ ಸಿಗುವಂತಾಗಲು ವಿವಿಧ ಇಲಾಖೆಗಳು, ಭಾರತೀಯ ವೈದ್ಯಕೀಯ ಸಂಘ, ಭಾರತೀಯ ಮಕ್ಕಳ ವೈದ್ಯರ ಸಂಘ, ಆಯುಷ್ ವೈದ್ಯಾಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ನಾಯ್ಕ್, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಭಾರತೀಯ ಮಕ್ಕಳ ವೈದ್ಯರ ಸಂಘದ ಅಧ್ಯಕ್ಷ ಡಾ.ರಾಜೀವ್, ಶಿಕ್ಷಣ ಇಲಾಖೆ ಶ್ರೀನಿವಾಸ್ ಸೇರಿದಂತೆ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ಆರ್‌ಸಿಎಚ್ ವೈದ್ಯಾಧಿಕಾರಿಗಳು ಇದ್ದರು.