Screenshot_2024_0909_144014

ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲರೂ ಕೈ ಜೋಡಿಸೋಣ : ಬಸವರಾಜ ರಾಯರೆಡ್ಡಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 13- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಜನತೆ ಭಾಗವಹಿಸಿ ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ತಿಳಿಸಿದ್ದಾರೆ.

ಗದಗ ಜಿಲ್ಲೆಯಿಂದ ಮಾನವ ಸರಪಳಿಯು ಕೊಪ್ಪಳ ಜಿಲ್ಲೆಯ ರಾಜ್ಯ ಹೆದ್ದಾರಿ ಬೆಳಗಟ್ಟಿ ಬಳಿ ಜೋಡಣೆಯಾಗಲಿದೆ. ಬೆಳಗಟ್ಟಿ ಗ್ರಾಮದಿಂದ ಆರಂಭವಾಗಿ ವಿವಿಧ ಗ್ರಾಮಗಳ ಮೂಲಕ ಕೊಪ್ಪಳ ನಗರದಿಂದ ಮುನಿರಾಬಾದ್ ಡ್ಯಾಂವರೆಗೆ ಬೃಹತ್ ಮಾನವ ಸರಪಳಿಯನ್ನು ಆಯೋಜನೆ ಮಾಡಲಾಗುತ್ತದೆ. ಭಾರತ ಸಂವಿಧಾನದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನರು ಕೈ ಜೋಡಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲೆಯ ಜನತೆಯಲ್ಲಿ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!