
ಸ್ವಸಹಾಯ ಸಂಘದ ಸದಸ್ಯರಿಗೆ, ಡಿಜಿಟಲ್ ಸಾಕ್ಷರತೆ ಬಗ್ಗೆ ಮಾಹಿತಿ ನೀಡಿ : ಮಡಿಗಿನ ಬಸಪ್ಪ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 2- ಶಿಕ್ಷಣದ ನಂತರ ಎಲ್ಲಾ ಸ್ವಸಹಾಯ ಸಂಘ ಸದಸ್ಯರಿಗೆ, ಡಿಜಿಟಲ್ ಸಾಕ್ಷರತೆ ಕುರಿತು, ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ಬಳ್ಳಾರಿ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಡಿಗಿನ ಬಸಪ್ಪ ಹೇಳಿದರು.
ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ಕುರಿತು ಬಳ್ಳಾರಿ ಮತ್ತು ಕುರುಗೋಡು ತಾಲೂಕಗಳ ಅರಿವು ಕೇಂದ್ರದ ಮೇಲ್ವಿಚಾರಕರಿಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾದ ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ತಾವು ತರಬೇತಿಯನ್ನು ಪಡೆದುಕೊಂಡ ನಂತರ, ತಮ್ಮ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ವಸಹಾಯ ಸಂಘದ ಸದಸ್ಯರಿಗೆ ಡಿಸ್ಟೆನ್ಸ್ ಸಾಕ್ಷರತೆ ಕುರಿತು ಮಾಹಿತಿ ನೀಡುವಂತೆ ಹೇಳಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಯೋಜನೆಗಳು ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಈ ತರಬೇತಿಯ ಮುಖ್ಯ ಉದ್ದೇಶ ಮಕ್ಕಳಿಗೆ ಮತ್ತು ನಾಗರಿಕರಿಗೆ ಪ್ರಜ್ಞ ಮೂಡಿಸುವಲ್ಲಿ ಮೌಲ್ಯ ಮನೋಭಾವ ಕೌಶಲ್ಯದ ಕುರಿತು ತಿಳಿ ಹೇಳಬೇಕೆಂದರು.
ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಸಹಾಯ ನಿರ್ದೇಶಕರು, ಗ್ರಾಮ ಡಿಜೆ ವಿಕಸನ ಜಿಲ್ಲಾ ಸಂಯೋಜಕರು, ಡಿಟಿಸಿ ಹಾಗೂ ಶಿಬಿರಾರ್ಥಿಗಳು, ತಾಲೂಕ ಪಂಚಾಯಿತಿ, ವ್ಯವಸ್ಥಾಪಕರು ಬಚ್ಚಲಪ್ಪ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.