
ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ : ಎಡಿಸಿ ಝುಬೇರ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 3- ಜಿಲ್ಲಾಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.೧೭ರಂದು ಜಿಲ್ಲಾಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬAಧ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಎಸ್‌ಪಿ ವೃತ್ತದ ಬಳಿಯಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ, ವಿವಿಧ ಕಲಾ ತಂಡಗಳಿAದ ಭವ್ಯ ಮೆರವಣಿಗೆಗೆ ನಡೆಯಲಿದೆ ಎಂದರು.
ಮೆರವಣಿಗೆಯು ಎಸ್‌ಪಿ ವೃತ್ತದಿಂದ ಆರಂಭವಾಗಿ ದುರ್ಗಮ್ಮ ದೇವಸ್ಥಾನ- ಗಡಿಗಿ ಚೆನ್ನಪ್ಪ ವೃತ್ತ – ಬೆಂಗಳೂರು ರಸ್ತೆ- ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ- ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಮುಂಭಾಗದಿAದ ವಾಲ್ಮೀಕಿ ಭವನದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ. ಬಳಿಕ, ವಾಲ್ಮೀಕಿ ಭವನದ ಆವರಣದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಬಳಿಕ ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಜಯಂತಿಯ ವೇದಿಕೆ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ಶಿಷ್ಠಾಚಾರದAತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಗಣ್ಯರನ್ನು ಆಹ್ವಾನಿಸಲಾಗುವುದು. ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಮಾಜದ ಬಾಂಧವರು ಸೇರಿದಂತೆ ಇತರರು ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಸಮುದಾಯದ ಮುಖಂಡರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.
ಜಿಲ್ಲೆಯ ಪರಿಶಿಷ್ಟ ಪಂಗಡ ಸಮುದಾಯದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ಮತ್ತು ಪಿಹೆಚ್‌ಡಿ ಪದವಿ ಪಡೆದವರಿಗೆ, ಹಾಗೆಯೇ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು. ಹಾಗೆಯೇ ವಾಲ್ಮೀಕಿ ಜಯಂತಿಯAದು ಭಾಷಣ ಮಾಡಲು ವಿಶೇಷ ಆಹ್ವಾನಿತರ ಹೆಸರು ಸೂಚಿಸುವಂತೆಯೂ ಸಮುದಾಯದ ಮುಖಂಡರಲ್ಲಿ ಕೋರಲಾಯಿತು.
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜದ ಮುಖಂಡರು ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ ಮಾಡುವ ಬಗ್ಗೆ ಹಲವು ಮಾಹಿತಿ ನೀಡಿದರು. ಕಾರ್ಯಕ್ರಮ ಅಚ್ಚುಕಟ್ಟು ವ್ಯವಸ್ಥೆಗೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಮೋದ್ ಕುಮಾರ್, ಬಳ್ಳಾರಿ ನಗರ ಡಿಎಸ್ಪಿ ಚಂದ್ರಕಾAತ ನಂದಾರೆಡ್ಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.