
7 ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ : ಪೂರ್ವಭಾವಿ ಸಭೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 4- ಜಿಲ್ಲಾಮಟ್ಟದ ಮತ್ತು ಹೊಸಪೇಟೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯ ಪೂರ್ವಭಾವಿ ಸಭೆಯು ಅಕ್ಟೋಬರ್ 07ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.
ಅ.04ರಂದು ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯನ್ನು ಕಾರಣಾಂತರಗಳಿAದ ಮುಂದೂಡಿ ಅ.07ಕ್ಕೆ ನಿಗದಿಪಡಿಸಲಾಗಿದೆ. ವಿಜಯನಗರ ಜಿಲ್ಲೆಯ ಜನಪ್ರತಿನಿಧಿಗಳು, ಸಂಘ-ಸ0ಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಗೆ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬೇಕು.
ವಿಜಯನಗರ ಜಿಲ್ಲಾ ಮಟ್ಟದ ಹಾಗೂ ಹೊಸಪೇಟೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರತಿನಿಧಿಗಳನ್ನು ನಿಯೋಜಿಸದೆ ಕಡ್ಡಾಯವಾಗಿ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.