
ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ ಶಾಸ್ತ್ರೀಜಿ ಜಯಂತಿ : ಶ್ರಮದಾನ, ಪ್ರತಿಜ್ಞಾವಿಧಿ ಸ್ವೀಕಾರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 2- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಹಾಗೂ ಲಾಲಬಹದ್ದೂರ ಶಾಸ್ತ್ರೀಜಿಯವರ ೧೨೧ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಶಾ, ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ವಿವೇಕಾನಂದ ಪಿ, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ ಸೇರಿದಂತೆ ಇನ್ನೀತರರು, ಮಹಾತ್ಮ ಗಾಂಧೀಜಿಯವರ ಹಾಗೂ ಲಾಲಬಹದ್ದೂರ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಪನೆ ಮಾಡಿ ಗೌರವ ಸಲ್ಲಿಸಿದರು.
ಶ್ರಮದಾನ ಕಾರ್ಯಕ್ರಮ: ಜಯಂತಿ ಹಿನ್ನೆಲೆಯಲ್ಲಿ ನಗರಸಭೆ, ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಸ್ವಚ್ಛತಾ ನಡಿಗೆ ಕಾರ್ಯಕ್ರಮ ನಡೆಯಿತು. ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್. ಅವರು ಸಲಿಕೆ, ಪೊರಕೆ, ಬುಟ್ಟೆ ಮತ್ತು ಇತರೆ ಪರಿಕರಗಳನ್ನು ಹಿಡಿದು ಶ್ರಮದಾನದಲ್ಲಿ ಭಾಗಿಯಾದರು.
ಅಪರ ಜಿಲ್ಲಾಧಿಕಾರಿಗಳಾದ ಇ ಬಾಲಕೃಷ್ಣಪ್ಪ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲೀಂ ಪಾಶಾ, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ನಗರಸಭೆಯ ಪೌರಾಯುಕ್ತರಾದ ಚಂದ್ರಪ್ಪ ಸಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್., ಹೊಸಪೇಟೆ ತಹಸೀಲ್ದಾರರಾದ ಶೃತಿ ಎಂ.ಎA., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ಕೆ ರಂಗಣ್ಣನವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.