
ಮೌಲನಾ ಆಜಾದ್ ಶಾಲೆ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 8- ಪ್ರಸಕ್ತ ಶೈಕ್ಷಣಿಕ ಸಾಲಿಗೆ ಹಗರಿಬೊಮ್ಮನಹಳ್ಳಿಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಕನ್ನಡ ಮತ್ತು ಸಮಾಜ ವಿಜ್ಞಾನ, ಗಣಿತ ಮತ್ತು ವಿಜ್ಞಾನ, ಇಂಗ್ಲೀಷ್ ಮತ್ತು ಹಿಂದಿ ಹಾಗೂ ಉರ್ದು ಶಿಕ್ಷಕರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ವಿದ್ಯಾರ್ಹತೆ ಉಳ್ಳವರು ನವಂಬರ್ ೧೫ ರೊಳಗೆ ಮೊ.ಸ0: ೯೭೪೧೩೪೨೦೩೦ ನ ವಾಟ್ಯಾಪ್ ನಂಬರ್‌ಗೆ ಸ್ವ-ವಿವರ ಕಳುಹಿಸಬೇಕು. ಕಂಪ್ಯೂಟರ್ ಜ್ಞಾನ ಹಾಗೂ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ ಮೂಖ್ಯೋಪಾದ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.