
ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಅಚ್ಚುಕಟ್ಟಾಗಿ ನಡೆಯಲಿ : ಇ ಬಾಲಕೃಷ್ಣಪ್ಪ
ಕರುನಾಡ ಬೆಳಗು ಸುದ್ದಿ
ವಿಜಯನಗರ, 01- ಪ್ರತಿ ವರ್ಷದಂತೆ ಈ ವರ್ಷವು ಸಹ ಅಕ್ಟೋಬರ್ ೨ರಂದು ಜಿಲ್ಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿçÃಜಿ ಅವರ ಜಯಂತ್ಯುತ್ಸವ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಇ ಬಾಲಕೃಷ್ಣಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿನ ತಮ್ಮ ಕಚೇರಿಯಲ್ಲಿ ಅಕ್ಟೋಬರ್ ೧ರಂದು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಯಂತಿ ಪೂರ್ವಭಾವಿ ಸಿದ್ಧತೆಯ ಬಗ್ಗೆ ಅವರು ಪರಿಶೀಲಿಸಿದರು.
ಅಕ್ಟೋಬರ್ ೨ರಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತಿçÃಜಿಯವರ ಭಾವಚಿತ್ರಕ್ಕೆ ಪೂಜೆ, ಪ್ರತಿಜ್ಞಾ ವಿಧಿ ಸ್ವೀಕಾರ ಸೇರಿದಂತೆ ನಾನಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ ಆಯಾ ಇಲಾಖೆಗಳಲ್ಲಿ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತಿçÃಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಳಿಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಗಾಂಧೀಜಿಯವರು ಶ್ರಮದಾನಕ್ಕೆ ವಿಶೇಷ ಒತ್ತು ನೀಡಿದ್ದರು. ಹೀಗಾಗಿ ಸಾರ್ವಜನಿಕರಿಗೆ ಉತ್ತಮ ಸಂದೇಶ ಹೋಗುವ ನಿಟ್ಟಿನಲ್ಲಿ ಜಯಂತ್ಯುತ್ಸವದ ಅಂಗವಾಗಿ ಬೆಳಗ್ಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಸ್ವಚ್ಛತಾ ನಡಿಗೆ ಕಾರ್ಯಕ್ರಮದಡಿ ನಡೆಯುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಭಾಗಿಯಾಗಬೇಕು ಎಂದು ಸೂಚನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸಂಘ-ಸAಸ್ಥೆಗಳ ಸದಸ್ಯರು, ವಿದ್ಯಾರ್ಥಿ ಯುವಜನರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.
ವಿಶೇಷ ಕಾರ್ಯಕ್ರಮ ಅಕ್ಟೋಬರ್ ೧೦ಕ್ಕೆ: ಮಹಾತ್ಮ ಗಾಂಧೀಜಿಯರ ಬದುಕು, ಸ್ವಾತಂತ್ರö್ಯ ಚಳುವಳಿ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಸ್ನಾತಕೋತ್ತರ-ಪದವಿ ವಿಭಾಗದಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಡೆಸಲಾಗಿತ್ತು.
ಗಾಂಧೀಜಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಿದಂತೆ ಅಕ್ಟೋಬರ್ ೧೦ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆಯುವ ಗಾಂಧೀಜಿ ಜಯಂತ್ಯುತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಗಾಂಧೀ ಭಜನೆ, ಸರ್ವಧರ್ಮ ಪ್ರಾರ್ಥನೆ, ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ ರಂಗಣ್ಣನವರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಾಶುಮೋದ್ಧೀನ್, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.