2

ಐಪಿಎಸ್ ಅಧಿಕಾರಿ ಚಂದ್ರಶೇಖರ್‌ರನ್ನು ಸೇವೆಯಿಂದ ಅಮಾನತ್ತುಗೊಳಿಸಿ : ಮಿನಳ್ಳಿ ತಾಯಣ್ಣ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 4- ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಎಂ.ಚ0ದ್ರಶೇಖರ್ ಹಲವಾರು ಭೂಗಳ್ಳರು, ವ್ಯಾಪಾರಸ್ಥರು, ಉದ್ಯಮಿಗಳು ಸಮಾಜಘಾತಕರು ಹಾಗೂ ಇತರರೊಂದಿಗೆ ಒಡನಾಟ ಬೆಳೆಸಿಕೊಂಡು ಶಾಮೀಲಾಗಿ ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.

ಇಂತ ಸರಣಿ ಅಪರಾಧಗಳನ್ನು ಎಸಗಿರುವ ಭ್ರಷ್ಟ ಅಧಿಕಾರಿಯಾಗಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಹಳ್ಳಿ ತಾಯಣ್ಣ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಪ್ರತಿಭಟನೆಯ ಮೂಲಕ ಜಿಲ್ಲಾ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ ಮಾಧ್ಯಮ ಜೊತೆ ಮಾತನಾಡಿ, ಕೇಂದ್ರ ಸಚಿವರು ಹಾಗೂ ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಕ್ರಮಕೈಗೊಳ್ಳಲು (ಂಟಟ Iಟಿಜiಚಿ Seಡಿviಛಿe ಖuಟes-೧೯೫೮) ರಂತೆ ಕೇಡರ್ ಪ್ರಾಧಿಕಾರದ ಅನುಮತಿ ಪಡೆಯಬೇಕಾಗಿರುತ್ತದೆ.

ಆದರೆ ನಮ್ಮ ನಾಯಕರಾದ ಕೇಂದ್ರ ಸಚಿವರು ಮತ್ತು ಚುನಾಯಿತ ಜನಪ್ರತಿನಿಧಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಅವಾಚ್ಯ ಮತ್ತು ಅಸಭ್ಯ ಪದಗಳನ್ನು ಬಳಸಿ ಪತ್ರವನ್ನು ಕಳುಹಿಸಿರುವುದು ಮತ್ತು ಈ ಪತ್ರವನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದು ಭಾರತೀಯ ಆಡಳಿತ ಸೇವಾ ನಿಯಮಗಳ ಪ್ರಕಾರ ದುರ್ನಡತೆಯಾಗಿರುತ್ತದೆ ಹಾಗೂ ಕಾನೂನು ಬಾಹಿರವಾಗಿರುತ್ತದೆ ಎಂದರು.

ಎ0.ಚ0ದ್ರಶೇಖರ್ ವಿರುದ್ಧ ಮತ್ತು ರಾಜ್ಯದ ಪೊಲೀಸ್ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಭ್ರಷ್ಟತೆಗೆ ಉತ್ತೇಜನ ನೀಡಿರುತ್ತದೆ. ಮತ್ತು ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನಲೆಯಲ್ಲಿ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತುಗೊಳಿಸಿ ಇವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಲು ಅಗತ್ಯವಿರುವ ದಾಖಲಾತಿಗಳೊಂದಿಗೆ ಭಾರತೀಯ ಪೊಲೀಸ್ ಸೇವೆಗಳ ವೃಂದದ ಪ್ರಾಧಿಕಾರವಾಗಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಕಳುಹಿಸಬೇಕೆಂದು ಜಿಲ್ಲಾ ವತಿಯಿಂದ ಒತ್ತಾಯಿಸುತ್ತೇವೆ ಈ ಸಂದರ್ಭದಲ್ಲಿ ನಗರ ಅಧ್ಯಕ್ಷ ವಂಡ್ರಿ ಬಸವ, ರಾಮು, ಅಶೋಕ ಮಹಿಳಾ ಅಧ್ಯಕ್ಷರಾದ ಜಮೀಲಾ, ಯುವ ಅಧ್ಯಕ್ಷ ಕಿರಣ್, ರೇಷ್ಮಾ, ನಾಗವೇಣಿ, ಶಬನಾ ಸೇರಿದಂತೆ ಹಲವಾರು ಜನ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!