4

ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ : ಸಚಿವ ಸಂತೋಷ್ ಲಾಡ್

ಕರುನಾಡ ಬೆಳಗು ಸುದ್ದಿ

ಬಳ್ಳಾರಿ/ಸಂಡೂರು, 31- ರಾಜ್ಯದಲ್ಲಿ ಸಂಪೂರ್ಣ ಅಭಿವೃದ್ಧಿ ಮತ್ತು ಬಡಜನ ಹಿತ ರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿ ಬೆಂಬಲಿಸಬೇಕೆಂದು, ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಉಪಚುನಾವಣೆ ಅಂಗವಾಗಿ ಸಂಡೂರು ತಾಲೂಕ ವ್ಯಾಪ್ತಿಯಲ್ಲಿ ಬರುವ ಗಂಗಲಪುರ, ಬನ್ನಿಹಟ್ಟಿ, ನಾಗಲಾಪುರದ ಗ್ರಾಮಗಳ ಜತೆಗೆ ಹಲವಾರು ಗ್ರಾಮಗಳನ್ನು ಭೇಟಿ ನೀಡಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಸುಳ್ಳು ಆಶ್ವಾಸದಗಳನ್ನು ಕೊಡುವ ಬಿಜೆಪಿಯನ್ನು ಮತದಾರರು ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕರಿಸಿರುವದಾಗಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆ ಗಳ ಜೊತೆಗೆ, ಬಡವರ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಜೊತೆಗೆ ರಾಜಾ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶ್ರಮಪಡುತ್ತಿರುವುದಾಗಿ ತಿಳಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಗೆದ್ದ ತುಕಾರಾಂ ಹಲವಾರು ಅಭಿವೃದ್ಧಿ ಕೆಲಸಗಳು ಕ್ಷೇತ್ರದಲ್ಲಿ ಮಾಡಿದ್ದಾರೆ ಎಂದರು.

ಅದೇ ರೀತಿಯಾಗಿ ಈ ಬಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರನ್ನು ಅತಿ ಹೆಚ್ಚಿನ ಮೆಜಾರಿಟಿಯಿಂದ ಗಳಿಸಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಸಂಸದ ತುಕಾರಾಂ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!