
ಗಾಯಕ ಪುರುಷೋತ್ತಮಗೆ ಮೈಸೂರಿನ ಸೇವಾ ಭೂಷಣ ಪ್ರಶಸ್ತಿ
ಕರುನಾಡ ಬೆಳಗು ಸುದ್ದಿ
ಕಂಪ್ಲಿ, 25- ತಾಲೂಕಿನ ಚಿಕ್ಕ ಜಾಯಿಗನೂರು ಗ್ರಾಮದ ಹಿಂದೂಸ್ತಾನಿ ಗಾಯಕ ಸಂಗೀತ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಡಿ.ಪುರುಷೋತ್ತಮರವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ೧೩ನೇ ವರ್ಷದ ವಾರ್ಷಿಕೋತ್ಸವ ಹಾಗೂ ಹಿಂದುಳಿದ ವರ್ಗದವರಿಗೆ ರಾಜರ್ಷಿ ಕೃಷ್ಣರಾಜ ಒಡೆಯರ್ ಮಾಡಿದ ಮೀಸಲಾತಿಯ ೧೦೫ರ ಸಂಭ್ರಮಾಚರಣೆ ಪ್ರಯುಕ್ತ ಸಾಧಕರಿಗೆ ಕೊಡುವ “ಸೇವಾ ಭೂಷಣ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.
ಪುರುಷೋತ್ತಮ ಡಿ ಇವರು ಸಂಗೀತ ಮತ್ತು ರಂಗಭೂಮಿ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಸೆ. ೨೮ ರಂದು ಮೈಸೂರಿನ ಕಲಾಮಂದಿರ ಆವರಣದ ಕಿರುರಂಗ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಎಚ್.ಎಲ್.ಯಮುನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.