504adc2f-fa0e-45c9-9e72-d5b5e5f41ddd

ಸರಕಾರದ ಯೋಜನೆಗಳನ್ನು ತಲುಪಿಸುವುದು ನಮ್ಮ ಜವಾಬ್ದಾರಿ : ನಲೀನ್ ಅತುಲ್

ಕರುನಾಡ ಬೆಳಗು ಸುದ್ದಿ

ಗಂಗಾವತಿ, 12- ಸರಕಾರದ ಯೋಜನೆಗಳ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದನ್ನು ನಾವುಗಳು ನಿಷ್ಠೆಯಿಂದ ಮಾಡಲಿದ್ದೆವೆ. ಫಲಾನುಭವಿಗಳು ಅರ್ಜಿ ಸಲ್ಲಿಸುವ ಮೂಲಕ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲೀನ್ ಅತುಲ್ ಕುಮಾರ ಹೇಳಿದರು.

ತಾಲೂಕಿನ ವೆಂಕಟಗಿರಿ ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರಕಾರ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆ, ಗೃಹ ಲಕ್ಷಿö್ಮ ಯೋಜನೆ ಸೇರಿದಂತೆ ನಾನಾ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಜನರು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲನೆಯನ್ನು ನಡೆಸಿ, ಫಲಾನುಭವಿಗಳನ್ನು ಆಯ್ಕೆ ಮಾಡಿ, ಯೋಜನೆಯನ್ನು ಅವರ ಮನೆ ಭಾಗಿಲಿಗೆ ತಲುಪಿಸಲಾಗುತ್ತಿದೆ. ಇವುಗಳು ಅಷ್ಟೇ ಅಲ್ಲದೆ ಸಂದ್ಯಾ ಸುರಕ್ಷಾ ಯೋಜನೆಯ ಅಡಿಯಲ್ಲಿ ನೀಡುವ ಸೌಲಭ್ಯಗಳನ್ನು ಸಹ ಫಲಾನುಭವಿಗಳಿಗೆ ತಲುಪಿಸಲಾಗುವುದು. ಗ್ರಾಮೀಣ ಭಾಗಗಳಲ್ಲಿ ಇರುವ ಜನರು ದೂರದ ತಹಸೀಲ್ದಾರ ಕಚೇರಿಗೆ ಹೋಗಿ, ಅರ್ಜಿಗಳನ್ನು ಸಲ್ಲಿಸಲು, ಅಧಿಕಾರಿಗಳ ಭೇಟಿಯಾಗಲು ಸಾಕಷ್ಟು ತೊಂದರೆಯಾಗುತ್ತದೆ. ಅದಕ್ಕಾಗಿಯೇ ಜಿಲ್ಲಾಡಳಿತವೇ ನಿಮ್ಮ ಊರಿಗೆ ಆಗಮಿಸಿ, ಜನರ ಸಮಸ್ಯೆಯನ್ನು ಕೇಳುವ ಕೆಲಸ ಮಾಡುತ್ತಿದೆ. ನಾನಾ ಇಲಾಖೆಯ ಅಡಿಯಲ್ಲಿ ನೆನೆಗುಂದಿಗೆ ಬಿದ್ದಿರುವ ಅರ್ಜಿಗಳನ್ನು ಪರಿಶೀಲನೆಯನ್ನು ನಡೆಸಿ, ಅಧಿಕಾರಿಗಳ ಸಮ್ಮುಖದಲ್ಲಿಯೇ ಅವುಗಳನ್ನು ಇತ್ಯರ್ಥ ಮಾಡಲಾಗುವುದು. ಅಷ್ಟೇ ಅಲ್ಲದೆ ಯೋಜನೆಯ ಲಾಭವನ್ನು ಪಡೆದುಕೊಳ್ಳದೆ ದೂರು ಉಳಿದಿರುವವರು ಅಧಿಕಾರಿಗಳು ನಿಮ್ಮ ಗ್ರಾಮಕ್ಕೆ ಬಂದಿದ್ದು, ಅರ್ಜಿಯನ್ನು ಸಲ್ಲಿಸುವ ಮೂಲಕ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಪ್ರವಾಸೋದ್ಯಮಕ್ಕೆ ಪ್ರೋತ್ಸಾಹಿಸಿ : ಕೊಪ್ಪಳ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ಸ್ಥಳಗಳು ಇವೆ. ಅವುಗಳನ್ನು ಅಭಿವೃದ್ಧಿ ಪಡಿಸಲು ಸ್ಥಳೀಯ ಜನರು ಪ್ರೋತ್ಸಾಹಿಸಬೇಕಾಗಿದೆ. ಗಂಗಾವತಿ ಭಾಗಕ್ಕೆ ಸಂಬAಧಪಟ್ಟAತೆ ಮೋರೆರ ಬೆಟ್ಟ, ವಾಣಿಭದ್ರೇಶ್ವರ ದೇವಸ್ಥಾನ, ಆನೆಗೊಂದಿ, ಸಣಾಪೂರ ಕೆರೆ, ಅಂಜನಾದ್ರಿ ಬೆಟ್ಟ, ಕನಕಗಿರಿ ದೇವಸ್ಥಾನಗಳು, ಕೆರೆ, ಬಾವಿಗಳು ಇವೆ. ಅವುಗಳನ್ನು ಪ್ರಚಾರ ಪಡಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯಿಂದ ೨ ಕೋಟಿ ಅನುದಾನವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಅದನ್ನು ಬಳಕೆ ಮಾಡಿಕೊಂಡು ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲಾಗುವುದು. ಆದರೆ ಸ್ಥಳೀಯ ಜನರ ಸಹಕಾರ ತುಂಬಾ ಅಗತ್ಯವಾಗಿದೆ. ದೇಶ, ವಿದೇಶಗಳಿಂದ ಪ್ರವಾಸಿ ಸ್ಥಳ ವೀಕ್ಷಣೆಗೆ ಬರುವ ಪ್ರವಾಸಿಗರ ಜೊತೆಗೆ ಸ್ನೇಹ ಮನೋಭಾವದಿಂದ ವರ್ತನೆಯನ್ನು ಮಾಡಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಸ್ಥಳೀಯ ಮಾರುಕಟ್ಟೆಗಳು ಸಹ ಅಭಿವೃದ್ಧಿಯಾಗುತ್ತವೆ ಎಂದು ಹೇಳಿದರು.

ಅರ್ಜಿಗಳ ಸಲ್ಲಿಕೆ : ಗ್ರಾ.ಪಂ ವ್ಯಾಪ್ತಿಯಲ್ಲಿ ವಿಕಲಚೇತನರಿಗೆ ಮೀಸಲಿಟ್ಟಿರುವ ಶೇ ೫ ರಷ್ಟು ಅನುದಾನವನ್ನು ಬಳಕೆ ಮಾಡಲು, ಗುಡ್ಡಗಾಡು ಪ್ರದೇಶ ವ್ಯಾಪ್ತಿಯಲ್ಲಿರುವ ಜಮೀನುಗಳ ಸರ್ವೆ ನಡೆಸಿ, ಅರಣ್ಯ ಭೂಮಿ ಗುರುತಿಸಲು, ಸರಕಾರಿ ಶಾಲೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು, ವ್ಯವಸ್ಥಿತವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭ ಮಾಡಲು, ಕನಕಗಿರಿ ಬಾಲಕ ವಸತಿ ನಿಲಯ ನಿರ್ಮಾಣದ ವಿರೋಧಿಸಿ ಹೀಗೆ ನಾನಾ ಸಮಸ್ಯೆಗಳ ಕುರಿತು ಸ್ಥಳೀಯರು ಅರ್ಜಿಗಳನ್ನು ಸಲ್ಲಿಕೆ ಮಾಡಿದರು.

ವೆಂಕಟಗಿರಿ ಗ್ರಾ.ಪಂ ಅದ್ಯಕ್ಷೆ ಅಕ್ಕಮ್ಮ ಕಂದಕೂರು, ಉಪಾಧ್ಯಕ್ಷೆ ಹುಲಿಗೆಮ್ಮ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಎಸ್ಪಿ ರಾಮ್.ಎಲ್. ಅರಸಿದ್ದಿ, ಎಡಿಸಿ ಸಿದ್ದರಾಮೇಶ್ವರ, ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರ ಯು.ನಾಗರಾಜ, ತಾ.ಪಂ ಇಒ ಲಕ್ಷ್ಷೀದೇವಿ ಹಾಗೂ ಇತರರಿದ್ದರು.

Leave a Reply

Your email address will not be published. Required fields are marked *

error: Content is protected !!