ವಿಕಲಚೇತನ ವಿದ್ಯಾರ್ಥಿಗಳಿಗೆ ನ್ಯಾಷನಲ್ ಇ-ಸ್ಕಾಲರ್ಶಿಪ್ : ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 14- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಉನ್ನತ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್ಸೈಟ್ https.scholarships.gov.in ರಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕ ಎಂ.ಆರ್.ಡಬ್ಲ್ಯೂಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: 9980126391, ಯಲಬುರ್ಗಾ/ಕುಕನೂರು ಬಸವರಾಜ ಮೊ.ಸಂ: 9591923910, ಕುಷ್ಟಗಿಯ ಚಂದ್ರಶೇಕರ ಮೊ.ಸಂ: 9916308585, ಗಂಗಾವತಿ, ಕನಕಗಿರಿ, ಕಾರಟಗಿ ಮಂಜುಳಾ ಮೊ.ಸಂ: 7975398202, ಇವರನ್ನು ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳನ್ನು ಹಾಗೂ ಕಚೇರಿಯ ದೂರವಾಣಿ ಸಂಖ್ಯೆ: 08539-295496 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
