ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನ ಆಚರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೨೫- ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ ಸಂಸ್ಥಾಪನ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಉದ್ಘಾಟನೆ ಮಾಡಿದ ಪ್ರಾಂಶುಪಾಲರಾದ ಶೋಭಾ ಕೆ.ಎಸ್. ರಾಷ್ಟ್ರಪ್ರೇಮ, ದೇಶಸೇವೆ, ನಿಸ್ವಾರ್ಥ ಸೇವೆಯ ಬಗ್ಗೆ ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಪ್ರಾಧ್ಯಾಪಕ ಡಾ.ಸರ್ಫರಾಜ್ ಅಹ್ಮದ್ ಅವರು ಸ್ವಚ್ಛಭಾರತ ಅಭಿಯಾನದ ಬಗ್ಗೆ ತಿಳಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥಸ್ವಾಮಿ, ಕೆ.ಎಂ.ಬಸವರಾಜ, ಕೆ.ಶ್ರೀನಾಥ್, ಎಸ್.ಎಲ್.ಶಿವಶರಣಪ್ಪ ಮನಮನೆಗಳ ಸೇವೆಯೊಂದಿಗೆ, ಸಮಾಜಸೇವೆಯ ಮಹತ್ವ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಸಹಾಯಕ ಪ್ರಾಧ್ಯಾಪಕ ತಾತಪ್ಪ.ಕೆ ರಾಷ್ಟ್ರೀಯ ಸೇವಾ ಯೋಜನೆಯ ಹುಟ್ಟು, ಬೆಳವಣಿಗೆ, ಕಾರ್ಯಯೋಜನೆಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಜ್ಞಾ ವಿಧಿ ಬೋಧಿಸಿದರು.
ಬೋಧಕೇತರ ಸಿಬ್ಬಂದಿಯಾದ ವಿನಾಯಕ ಹಾಗೂ ಜಬೀನಾಬೇಗಂ ಹಾಗೂ ಕಾಲೇಜಿನ ಸಮಸ್ತ ವಿದ್ಯಾರ್ಥಿ ಬಳಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಉಪಸ್ಥಿತರಿದ್ದರು.
