
ಗುಂಡು ಎಸೆತದಲ್ಲಿ ನಿರ್ಮಲ ಆರುಬೆರಳಿನ್ ರಾಜ್ಯಮಟ್ಟಕ್ಕೆ ಆಯ್ಕೆ
ಕರುನಾಡ ಬೆಳಗು ಸುದ್ದಿ
ಕುಕನೂರು, 29- ಪಟ್ಟಣದ ಶ್ರೀ ಗವಿಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರ ಪುತ್ರಿ ನಿರ್ಮಲ ಪ್ರಶಾಂತ್ ಆರುಬೆರಳಿನ್ ಕೊಪ್ಪಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದಾಳೆ.
ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸರ್ವ ಸದಸ್ಯರು ಶಾಲಾ ಸುಧಾರಣೆಯ ಸಮಿತಿಯ ಸದಸ್ಯ ಸಿದ್ದು ಉಳ್ಳಾಗಡ್ಡಿ, ಅನಿಲ್ ಆಚಾರ್, ಗವಿಸಿದ್ದಪ್ಪ ಕರ್ಮಣಿ, ಮಾರುತಿ ಗಾವರಾಳ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯ ಬಸವಣ್ಣಮ್ಮ ಹರಳಲೆಮಠ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಬಂಡಿವಡ್ಡರ ಸಂಸ್ಥೆಗೆ ಕೀರ್ತಿ ತಂದಕ್ಕೆ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.