
ನಿವೇದಿತಾರ ನಿಸ್ವಾರ್ಥ ಸೇವೆ: ಸ್ಮರಣಿಯ ; ವಿಜಯೇಂದ್ರ
ಕರುನಾಡ ಬೆಳಗು ಸುದ್ದಿ
ಬೆಂಗಳೂರು,28- ಹೊರದೇಶದಿಂದ ಇಲ್ಲಿ ಬಂದು ನಮ್ಮ ಪರಂಪರೆಯನ್ನು ಅಳವಡಿಸಿಕೊಂಡು ಇಲ್ಲಿ ತಾಯಂದಿರಿಗೆ ಶಿಕ್ಷಣ ಸೇವೆ ನೀಡಿದ ಸಹೋದರಿ ನಿವೇದಿತಾ ಅವರ ಸೇವೆ ಸದಾ ಸ್ಮರಣೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ಅವರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಹೋದರಿ ನಿವೇದಿತಾ ಅವರ 157ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಅಕ್ಟೋಬರ್ 28ರಂದು 1867ರಲ್ಲಿ ಜನಿಸಿದ ಮಾರ್ಗರೆಟ್ ಎಲಿಜಬೆತ್ ಅವರು ಸ್ವಾಮಿ ವಿವೇಕಾನಂದರ ಪ್ರಭಾವಕ್ಕೆ ಒಳಗಾಗಿ, ಅವರ ತತ್ವ, ಸಿದ್ಧಾಂತಕ್ಕೆ ಮಾರು ಹೋದವರು ಎಂದು ವಿವರಿಸಿದರು.
1898ರಲ್ಲಿ ಅವರು ಭಾರತಕ್ಕೆ ಬಂದಿದ್ದು, ವಿವೇಕಾನಂದರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದರು. ಪಶ್ಚಿಮ ಬಂಗಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಕೊಡುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು. ಭಾರತದ ಸಂಸ್ಕøತಿ, ಪರಂಪರೆಯನ್ನು ಮೈಗೂಡಿಸಿಕೊಂಡು ಸ್ವಾಮಿ ವಿವೇಕಾನಂದರ ಮಾರ್ಗದರ್ಶನದಲ್ಲಿ ಶಿಕ್ಷಣ ವಂಚಿತ ತಾಯಂದಿರಿಗೆ ಶಿಕ್ಷಣ ನೀಡುವ ಕೆಲಸವನ್ನು ಅವರು ನಿಸ್ವಾರ್ಥ ಸೇವೆಯ ರೂಪದಲ್ಲಿ ಮಾಡಿದ್ದರು ಎಂದು ತಿಳಿಸಿದರು.
ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಪ್ರಭು ಚವ್ಹಾಣ್, ಎನ್.ಮಹೇಶ್, ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ಡಾ.ಲಕ್ಷ್ಮಿ ಅಶ್ವಿನ್‍ಗೌಡ, ಕು. ಲಲಿತಾ ಅನಪೂರ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.