
ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಸಭೆಗೆ ಹಾಜರಾಗಲು ಅಧಿಕಾರಿಗಳಿಗೆ ಸೂಚನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 24- ರಾಯಚೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ ೨೬ರಂದು ನಿಗದಿಯಾದ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸಭೆಗೆ ಕೊಪ್ಪಳ ಜಿಲ್ಲೆಯ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ನೇತೃತ್ವದ ವಿವಿಧ ಸದಸ್ಯರನ್ನೊಳಗೊಂಡ ಸಮಿತಿಯು ಸೆ.೨೬ರಂದು ಕೈಗೊಂಡ ಪ್ರವಾಸ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳ ಪ್ರಗತಿ, ಅನುದಾನ ಬಳಕೆಯ ವಿವರ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಸಮಿತಿಯ ಅಧ್ಯಕ್ಷ ಪಿ.ಎಂ.ನರೇ0ದ್ರಸ್ವಾಮಿ ನೇತೃತ್ವದಲ್ಲಿ ಸದಸ್ಯರಾದ ಬಿ.ಜಿ. ಗೋವಿಂದಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಅಬ್ಬಯ್ಯ ಪ್ರಸಾದ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ., ಮಾನಪ್ಪ ಡಿ. ವಜ್ಜಲ, ಬಸನಗೌಡ ದದ್ದಲ, ಅನಿಲ್ ಚಿಕ್ಕಮಾದು, ಬಸವರಾಜ್ ಮತ್ತಿಮೂಡ್, ಎನ್. ಶ್ರೀನಿವಾಸಯ್ಯ, ಕೆ.ಸಿ. ವೀರೇಂದ್ರ ಪಪ್ಪಿ, ಪ್ರಕಾಶ ಕೋಳಿವಾಡ, ಕೃಷ್ಣ ನಾಯಕ, ಸಿಮೆಂಟ್ ಮಂಜು, ಶ್ರೀಮತಿ ಕರೆಮ್ಮ, ಶಾಂತರಾಮ್ ಬುಡ್ನ ಸಿದ್ದಿ, ರಾಜೇಂದ್ರ ರಾಜಣ್ಣ, ವೈ.ಎಂ. ಸತೀಶ್ ಹಾಗೂ ಜಗದೇವ್ ಗುತ್ತೇದಾರ್ ಅವರನ್ನೊಳಗೊಂಡ ಸಮಿತಿಯು ಸೆಪ್ಟೆಂಬರ್ ೨೬ರಂದು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ಅಥವಾ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ ೨.೩೦ಕ್ಕೆ ಕೊಪ್ಪಳ ಜಿಲ್ಲೆಗೆ ಸಂಬAಧಿಸಿದAತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.