ಕನಕಗಿರಿ : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 12- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ೨೦೨೪-೨೫ನೇ ಸಾಲಿನಲ್ಲಿ ಕನಕಗಿರಿ ತಾಲೂಕಿನಲ್ಲಿ ಹೊಸದಾಗಿ ಪ್ರಾರಂಭವಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನಕಗಿರಿ ಪಟ್ಟಣದಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗತ್ಯ ಸ್ಥಳವಕಾಶ ಹಾಗೂ ಮೂಲಭೂತ ಸೌಕರ್ಯ ಹೊಂದಿರುವ ಬಾಡಿಗೆ ಕಟ್ಟಡ ಅವಶ್ಯಕವಿರುತ್ತದೆ.
ಆಸಕ್ತಿ ಹೊಂದಿರುವ ಖಾಸಗಿ ಕಟ್ಟಡ ಮಾಲೀಕರು ಕನಕಗಿರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊಬೈಲ್ ಸಂಖ್ಯೆಗೆ ೯೮೮೦೯೫೮೫೦೩ಗೆ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಸುರೇಶ್ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
