2c136fae-be38-4577-97e1-318669006cc9

ಕುಕನೂರು ಪ.ಪಂ : ವಿವಿಧ ಸೌಲ್ಯಭ್ಯಗಳಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, ೨೫- ಕುಕನೂರು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಣ್ಣ ಉದ್ದಿಮೆದಾರರಿಗೆ ಸಹಾಯ ಧನ, ಬುದ್ದಿ ಮತ್ತು ಬಹುವಿಧ ಅಂಗವಿಕಲಚೇತನ ಮಕ್ಕಳ ಆರೈಕೆದಾರರಿಗೆ ಪೋಷಣಾ ಭತ್ಯೆ ಹಾಗೂ ಪ.ಜಾತಿ ಜನರಿಗೆ ಶಸ್ತ್ರ ಚಿಕಿತ್ಸೆಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸನ್ ೨೦೨೧-೨೨ನೇ ಸಾಲಿನ ಶೇ.೫ ರಲ್ಲಿ ಕುಕನೂರು ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬುದ್ಧಿಮಾಂದ್ಯ ಮತ್ತು ಬಹುವಿಧ ಮಕ್ಕಳ ಆರೈಕೆದಾರರಿಗೆ ಪೋಷಣಾ ಭತ್ಯೆಯನ್ನು ನೀಡಲಾಗುತ್ತಿದ್ದು, ಈ ಸೌಲಭ್ಯ ಪಡೆಯಲು ಫಲಾನುಭವಿಗಳು ಅಂಗವಿಕಲತೆ ಪ್ರಮಾಣ ಪತ್ರ, ವಿಕಲಚೇತನ ಮತ್ತು ಆರೈಕೆದಾರರ ಆಧಾರ ಕಾರ್ಡ, ರೇಷನ್ ಕಾರ್ಡ, ಆದಾಯ ಪ್ರಮಾಣ ಪತ್ರ ಹಾಗೂ ವಿಕಲಚೇತನರ ಇತ್ತೀಚಿನ ೨ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಪ.ಜಾತಿ ಜನಾಂಗದವರ ಸಣ್ಣ ಉದ್ದಿಮೆದಾರರಿಗೆ (ಬ್ಯಾಕ್ ಆ್ಯಂಡ್ ಸಬ್ಸಿಡಿ) ಸಹಾಯಧನ ಪಡೆಯಲು ಉದ್ದಿಮೆಗಾಗಿ ಸಾಲ ಪಡೆದ ಸಬ್ಸಿಡಿ ಕುರಿತು ಬ್ಯಾಂಕಿನಿAದ ದೃಢೀಕರಣ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ, ಆಧಾರ್ ಕಾರ್ಡ, ಚುನಾವಣಾ ಗುರುತಿನ ಚೀಟಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಪ.ಜಾತಿ ಜನರಿಗೆ ಶಸ್ತ್ರ ಚಿಕಿತ್ಸೆಗೆ ಸಹಾಯಧನ ಪಡೆಯಲು ಶಸ್ತ್ರ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾದ ದಾಖಲೆ ಹಾಗೂ ಮೂಲ ಬಿಲ್ ಇತರೆ ದಾಖಲೆಗಳಿಗೆ ಜಿಲ್ಲ ಶಸ್ತ್ರ ಚಿಕಿತ್ಸಕರು ಕೊಪ್ಪಳ ಇವರಿಂದ ದೃಢೀಕರಿಸಿ ನೀಡುವುದು, ಜಾತಿ & ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ, ಆಧಾರ ಕಾರ್ಡ,ಚುನಾವಣಾ ಗುರುತಿನ ಚೀಟಿ ಹಾಗೂ ಇತ್ತೀಚಿನ ೨ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ಮೇಲ್ಕಂಡ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕುಕನೂರು ಪಟ್ಟಣ ಪಂಚಾಯತ ವ್ಯಾಪ್ತಿಯ ಖಾಯಂ ನಿವಾಸಿಯಾಗಿರಬೇಕು. ಅರ್ಜಿಯನ್ನು ಸೆಪ್ಟೆಂಬರ್ ೩೦ ರೊಳಗೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಪೂರ್ಣ ದಾಖಲಾತಿ ಇರದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೇ ತಿರಸ್ಕರಿಸಲಾಗುವುದು. ಮೊದಲು ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮೊದಲನೇ ಆದ್ಯತೆ ನೀಡಲಾಗುತ್ತದೆ. ಅಗತ್ಯವಿದ್ದಲ್ಲಿ ಕಾರ್ಯಾಲದಿಂದ ಕೋರಿದ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!