KB

ತಂಬಾಕು ಮುಕ್ತ ಯುವ ಅಭಿಯಾನ 2.0 ಅರಿವು ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 3- ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಅರಿವು ಮೂಡಿಸುವ ಕಾರ್ಯಕ್ರಮವು ಸೆ.27 ರಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.

ಹಿರಿಯ ತಜ್ಞರಾದ ಡಾ. ಪ್ರಶಾಂತ ಬಾಬು ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಂಬಾಕು ಸೇವನೆ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ತಂಬಾಕು ಸೇವನೆಯಿಂದಾಗಿ ಆರೋಗ್ಯ ಮತ್ತು ಸಮಾಜದ ಮೇಲೆ ಬಹಳಷ್ಟು ದುಷ್ಪರಿಣಾಮಗಳು ಬೀರುತ್ತವೆ ಹಾಗೂ ತಂಬಾಕು ಸೇವನೆಯಿಂದ ಮನುಷ್ಯನ ದೇಹದ ಮೇಲೆ ಅಂಗಾಂಗ ವೈಕಲ್ಯ ಉಂಟಾಗುತ್ತದೆ ಮತ್ತು ದೇಶದ ಆರ್ಥಿಕ ಅಭಿವೃದ್ಧಿಯು ಕುಂಠಿತಗೊಳ್ಳುತ್ತದೆ ಎಂದರು.

ಯುವ ಜನತೆಯ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಯುವಕರು ತಂಬಾಕು ದುಶ್ಚಟಕ್ಕೆ ಹೆಚ್ಚು ಬಲಿಯಾಗುತ್ತಿದ್ದು, ಯುವಕರಿಗೆ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು ಸ್ವಯಂ ಪ್ರೇರಣೆಯಿಂದ ತಂಬಾಕು ತ್ಯಜಿಸುವಂತೆ ಯುವಕರಿಗೆ ಮನವೊಲಿಸುವ ಕಾರ್ಯ ಮಾಡುವುದು ಅವಶ್ಯವಾಗಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸರ್ಜರಿ ವಿಭಾಗದ ಹಿರಿಯ ತಜ್ಞರಾದ ಡಾ.ಚನ್ನಕೇಶವ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ.ನಾಗೇಂದ್ರ, ಶಾಂತಮ್ಮ ಕಟ್ಟಿಮನಿ ಸೈಕಾಲಾಜಿಸ್ಟ್, ಎಲ್.ವ್ಹಿ ಸಜ್ಜನರ್ ಹಿ.ಆ.ನಿ.ಅ ಮತ್ತು ಎನ್.ಸಿ.ಡಿ ಕ್ಲಿನಿಕ್ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!