
ಕ್ಯೂಆರ್ ಕೋಡ್ ಸ್ಕಾö್ಯನ್ ಮಾಡಿ ಕಾಮಗಾರಿ ಬೇಡಿಕೆ ಸಲ್ಲಿಸಿ : ಸಾರಂಗಮಠ
ಕರುನಾಡ ಬೆಳಗು ಸುದ್ದಿ
ಕುಕನೂರ, 19- ತಾಲೂಕಿನ ಮಸಬಹಂಚಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ೨೦೨೫-೨೬ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೆ ಪ್ರಾರಂಭಿಸಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೈಜನಾಥ ಸಾರಂಗಮಠ ಮಾತನಾಡಿ, ಪ್ರತೀ ವರ್ಷದಂತೆ ಇದೇ ಅಕ್ಟೋಬರ್-೨ ರಿಂದ ಕ್ರಿಯಾ ಯೋಜನೆ ತಯಾರಿಕೆ ಪ್ರಕ್ರಿಯೇ ಪ್ರಾರಂಭವಾಗಿದ್ದು, ಅದರಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಗ್ರಾಮಸ್ಥರು ನರೇಗಾ ಕಾಮಗಾರಿ ಬೇಡಿಕೆಯನ್ನು ಕ್ಯೂಆರ್ ಕೋಡ್ ಸ್ಕಾö್ಯನ್ ಮಾಡಿ ಅರ್ಜಿ ಸಲ್ಲಿಸಬಹುದು ಇದರಿಂದ ಯೋಜನೆಯ ಸದುಪಯೋಗವನ್ನು ಅವಶ್ಯವಿರುವ ಫಲಾನುಭವಿಗಳು ಪಡೆದುಕೊಳ್ಳಬಹುದು.
ಒಬ್ಬ ಫಲಾನುಭವಿ ೩ ಕಾಮಗಾರಿಗಳವರೆಗೆ ಅರ್ಜಿ ಸಲ್ಲಿಸಬಹುದು.
ಈ ಕಾಮಗಾರಿಯನ್ನು ಫಲಾನುಭವಿಗಳು ತಮ್ಮ ಮೋಬೈಲ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಇದರಿಂದ ಫಲಾನುಭವಿ ನೇರವಾಗಿ ಅರ್ಜಿ ಸಲ್ಲಿಸುವುದರಿಂದ ಮಧ್ಯವರ್ತಿಗಳ ಇಲ್ಲದೇ ಕಾಮಗಾರಿ ಕ್ರಿಯಾ ಯೋಜನೆ ಯಾಗುತ್ತದೆ ಈ ಎಲ್ಲಾ ಕಾಮಗಾರಿಗಳನ್ನು ಸಂಗ್ರಹಿಸಿ ಆಧ್ಯತಾ ಪಟ್ಟಿ ತಯಾರಿಸಿ ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ ಇದರಿಂದಾಗಿ ನೈಜ ಫಲಾನುಭವಿಗಳಿಗೆ ಅವಕಾಶ ಸಿಗುವಂತಾಗಿದೆ ಎಂದರು.
ತಾಲೂಕ ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ, ಅಕ್ಟೋಬರ್ ತಿಂಗಳಾAತ್ಯದವರೆಗೆ ವಿಶೇಷ ಐಇಸಿ ಅಭಿಯಾನದಡಿಯಲ್ಲಿ ಮನೆ ಮನೆ ಭೇಟಿ ಮಾಡಿ ಕಾಮಗಾರಿ ಬೇಡಿಕೆ ಪೆಟ್ಟಿಗೆಯಲ್ಲಿ ಕಾಮಗಾರಿಗಳನ್ನು ಸಂಗ್ರಿಸಲಾಗುತ್ತಿದ್ದು, ನರೇಗಾ ಫಲಾನುಭವಿಗಳು ಕಾಮಗಾರಿಗಳನ್ನು ಪೆಟ್ಟಿಗೆಯಲ್ಲಿ ಹಾಕಬಹುದು, ಸದರಿ ಕಾಮಗಾರಿಗಳನ್ನು ತಾಂತ್ರಿಕ ಸಂಯೋಜಕರು ಪೂರ್ವಭಾವಿಯಾಗಿ ವೀಕ್ಷಣೆ ಮಾಡಿ ಅಂದಾಜು ಪತ್ರಿಕೆ ತಯಾರಿಸುತ್ತಾರೆ. ಅದೇ ಕಾಮಗಾರಿಯನ್ನು ಕ್ರಿಯಾ ಯೋಜನೆಯಲ್ಲಿ ಇಡುವುದರಿಂದ ಎಲ್ಲಾ ಕಾಮಗಾರಿಗಳು ಕಡ್ಡಾಯವಾಗಿ ಅನುಷ್ಠಾನ ಮಾಡಬಹುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಆನಂದಪ್ಪ ಮಾದನೂರ, ಕ್ಲಸ್ಟರ್ ಸುಪರ್‌ವೈಜರ್ ಪೂಜಾ ನಾಯಕ್, ಶ್ರೀ ಗವಿಸಿದ್ದೇಶ್ವರ ಉPಐಈ ಪದಾಧಿಕಾರಿಗಳು, ಒಃಏ, ಐಅಖP, ಕೃಷಿ ಸಖಿ, ಪಶು ಸಖಿ, ಬಿಸಿ ಸಖಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮಸ್ಥರು ಸ್ವ-ಸಹಾಯ ಸಂಘದ ಮಹಿಳೆಯರು ಹಾಜರಿದ್ದರು.