2

ಉಪಚುನಾವಣಾ ಪ್ರಚಾರ ಯಶಸ್ವಿಯಾಗಲಿದೆ ಬಿಜೆಪಿ ಗೆಲ್ಲಲಿದೆ : ವಿಜಯೇಂದ್ರ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 25- ಸಂಡೂರು ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಬಳ್ಳಾರಿಯ ಮನೆಗೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಮಾಡಿ ಮಾತುಕತೆ ನಡೆಸಿದರು.

ನಗರದಲ್ಲಿ ನಡೆದಿರುವ ಕಾಶಿ ಜಗದ್ಗುರುಗಳ ಕಾರ್ಯಕ್ರಮದಲ್ಲಿ ಆಶೀರ್ವಾದಕ್ಕಾಗಿ ಹೋಗುವ ಮಾರ್ಗದಲ್ಲಿ ಬಿ.ಶ್ರೀರಾಮುಲು ಅವರನ್ನು ಭೇಟಿಯಾದ ಬಿ.ವೈ.ವಿಜಯೇಂದ್ರ ಅವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಉಪಹಾರ ಸೇವಿಸಿ ಸಂಡೂರು ಉಪಚುನಾವಣೆಯ ಕುರಿತು ಪಕ್ಷ ಕೈಗೊಂಡಿರುವ ರೂಪರೇಶಗಳ ಕುರಿತು ಮತ್ತು ತಂತ್ರಗಾರಿಕೆ ಕುರಿತು ಚರ್ಚೆ ನಡೆಸಿದರು.

ಬಿ.ವೈ.ವಿಜಯೇಂದ್ರ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಅಭ್ಯರ್ಥಿಯ ಜೊತೆಗಿದ್ದಾರೆ ಚುನಾವಣಾ ಪ್ರಚಾರ ಯಶಸ್ವಿಯಾಗಿ ನಡೆಯಲಿದೆ ಬಿಜೆಪಿ ಗೆಲ್ಲಲಿದೆ ಎಂದು ಪತ್ರಕರ್ತರಿಗೆ ತಿಳಿಸಿದರು.
ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!