
ಕುಷ್ಟಗಿ: ಆ.12 ಸೋಮವಾರ ರಂದು ಪತ್ರಿಕಾ ದಿನಾಚರಣೆ
ಕುಷ್ಟಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಕುಷ್ಟಗಿ ವತಿಯಿಂದ ಆ.12ರಂದು ಸೋಮವಾರ ಪಟ್ಟಣದ ಶಾಖಾಪೂರ ರಸ್ತೆಯಲ್ಲಿ ಇರುವ ಆರ್ ಪಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಹಾಗೂ ಪತ್ರಿಕಾ ವಿತರಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ.
ಸಂಸದ ರಾಜಶೇಖರ ಹಿಟ್ನಾಳ ಅವರ ಘನ ಉಪಸ್ಥೀತಿಯಲ್ಲಿ ಈ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದೊಡ್ಡನಗೌಡ ಪಾಟೀಲ ನೇರವೇರಿಸಲಿದ್ದಾರೆ, ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಮರೇಗೌಡ ಭಯ್ಯಾಪೂರ, ಕಾಡಾ ನಿಗಮದ ಅಧ್ಯಕ್ಷ ಹಸನಸಾಬ ದೋಟಿಹಾಳ, ಮಾಜಿ ಶಾಸಕ ಕೆ ಶರಣಪ್ಪ ವಕೀಲರು, ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ವೆಂಕಟೇಶ ಕುಲಕರ್ಣಿ ವಹಿಸಲಿದ್ದು ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಹಾಗೂ ಜಿಲ್ಲಾ ಪಧಾದಿಕಾರಿಗಳು, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಬಸವರಾಜ ಪಲ್ಲೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..