
ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 3 ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಗಳಡಿಯಲ್ಲಿ ಆರೋಗ್ಯ ಇಲಾಖೆಯಿಂದ ವಿಜಯನಗರ ಜಿಲ್ಲೆಯ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ.
ಆರೋಗ್ಯ ನಿರೀಕ್ಷಣಾಧಿಕಾರಿ ೧ ಹುದ್ದೆ, ಕಿರಿಯ ಆರೋಗ್ಯ ಸಹಾಯಕರು (ನಮ್ಮ ಕ್ಲಿನಿಕ್) ೦೬ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ ಈ ನೇಮಕಾತಿಯ ಒಟ್ಟು ಅರ್ಜಿ ಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆ ಪಟ್ಟಿ ತಿರಸ್ಕೃತ ಅರ್ಜಿಗಳ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಕ್ಟೋಬರ್ ೯ರ ಸಂಜೆ ೫:೩೦ ಗಂಟೆಯೊಳಗಾಗಿ ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.