
ವಾಲ್ಮೀಕಿ ಜಯಂತಿ : ಮದ್ಯೆ ಮಾರಾಟ ನಿಷೇಧಿಸಿ ಆದೇಶ
ಕರುನಾಡ ಬೆಳಗು ಸುದ್ದಿ
ವಿಜಯನಗರ, 15- ವಾಲ್ಮೀಕಿ ಜಯಂತಿ ಆಚರಣೆ ಪ್ರಯುಕ್ತ ಕೂಡ್ಲಿಗಿ ಪಟ್ಟಣ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಶಾಂತ ರೀತಿಯಿಂದ ಜಯಂತಿ ಆಚರಿಸುವ ಸಲುವಾಗಿ ಅಕ್ಟೋಬರ್ 16 ರಂದು ಬೆಳಿಗ್ಗೆ 6 ಗಂಟೆಯಿ0ದ ಅಕ್ಟೋಬರ್ 17ರ ರಾತ್ರಿ 12 ಗಂಟೆಯವರೆಗೆ ಕೂಡ್ಲಿಗಿ ಪಟ್ಟಣ ವ್ಯಾಪ್ತಿಯಲ್ಲಿನ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ಹಾಗೂ ಮದ್ಯದಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಈ ಸಮಯದಲ್ಲಿ ಸಾರ್ವಜನಿಕರು ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆ ಮಾಡಿ ಮದ್ಯದ ಅಮಲಿನಲ್ಲಿ ಗಲಾಟೆಗಳು ಆಗುವ ಸಂಭವ ಇರುವ ಕಾರಣದಿಂದಾಗಿ ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಇಲಾಖೆಯ ಉಪ ಆಯುಕ್ತರು ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.