
ಕಕರಸಾ ನಿಗಮದ ಸಾರಿಗೆ ಸೌಲಭ್ಯಕ್ಕೆ ನಾಳೆ ಫೋನ್ ಇನ್ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 1- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಸಮರ್ಪಕ ಸಾರಿಗೆ ಸೌಲಭ್ಯ ಕುರಿತಂತೆ ಫೋನ್ ಇನ್ ಕಾರ್ಯಕ್ರಮವನ್ನು ಸೆಪ್ಟೆಂಬರ್ ೨ರಂದು ಹಮ್ಮಿಕೊಳ್ಳಲಾಗಿದೆ.
ಕಕರಸಾ ನಿಗಮ ಕೊಪ್ಪಳ ವಿಭಾಗವು ಪ್ರಪ್ರಥಮ ಬಾರಿಗೆ ಕೊಪ್ಪಳ ಜಿಲ್ಲೆಯಲ್ಲಿ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಸಾರ್ವಜನಿಕರು ಕಕರಸಾ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಎಂ.ವೆAಕಟೇಶ ಅವರೊಂದಿಗೆ ನೇರವಾಗಿ ಮಾತನಾಡಲು ಅವಕಾಶ ಕಲ್ಪಿಸಿದ್ದು, ಈ ಹಿನ್ನೆಲೆಯಲ್ಲಿ ಫೋನ್ ಇನ್ ಕಾರ್ಯಕ್ರಮ ಸೆ.೦೨ರ ಮಧ್ಯಾಹ್ನ ೦೩.೩೦ ರಿಂದ ಸಂಜೆ ೦೫:೩೦ರ ವರೆಗೆ ನಡೆಯಲಿದೆ.
ಈ ಫೋನ್ ಇನ್ ಕಾರ್ಯಕ್ರಮದಲ್ಲಿ “ನಿಮ್ಮ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ?, ಬಸ್‌ಪಾಸ್ ಹೊಂದಿದ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುವುದಿಲ್ಲವೇ?, ನಿಮ್ಮ ಊರಿನಲ್ಲಿ ಬಸ್ ನಿಲುಗಡೆ ಮಾಡುತ್ತಿಲ್ಲವೇ? ಹಾಗೂ ಬಸ್ ನಿಲ್ದಾಣಗಳ ನಿರ್ವಹಣೆ ಸಮರ್ಪಕವಾಗಿದೆಯೇ?” ಎಂಬ ಹಲವಾರು ಪ್ರಶ್ನೆಗಳಿಗೆ ಕಕರಸಾ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಉತ್ತರಿಸಲಿದ್ದು, ಸಾರ್ವಜನಿಕ ಪ್ರಯಾಣಿಕರು ದೂರವಾಣಿ ಸಂಖ್ಯೆ: ೭೭೬೦೯೯೨೪೦೨ & ೬೩೬೬೪೨೩೮೮೪ ಗೆ ಕರೆ ಮಾಡಬಹುದಾಗಿದೆ ಎಂದು ಕ.ಕ.ರ.ಸಾ ನಿಗಮ ಕೊಪ್ಪಳ ವಿಭಾಗದ ಪ್ರಕಟಣೆ ತಿಳಿಸಿದೆ.