
ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ಹಮಾಲರು ಕಾರ್ಮಿಕರು ಸದುಪಯೋಗಿಸಿಕೊಳ್ಳಿ : ಶಾಸಕ ಬಿ ಎಂ ನಾಗರಾಜ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 19- ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ಹಮಾಲರು ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಎಂ.ನಾಗರಾಜ ಕರೆಕೊಟ್ಟರು.
ಸಿರುಗುಪ್ಪ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ರಿಜಿಸ್ಟರ್ ಮಿಲ್ ಗೋಡನ್ ವೇರ್ ಹೌಸ್ ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಿರುಗುಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕರಿಬಸಪ್ಪ, ಗುಲ್ಬರ್ಗ ವಿಭಾಗ ಕಾರ್ಮಿಕ ಇಲಾಖೆ ಅಧಿಕಾರಿ ಹಮಾಲಿ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಗರಸಭಾ ಸದಸ್ಯ ಬಿ.ವೆಂಕಟೇಶ್, ಎಚ್.ಗಣೇಶ್, ಮುಖಂಡರಾದ ಬಿ.ಉಮೇಶಗೌಡ, ಸಿರುಗುಪ್ಪ ತಾಲೂಕಿನ ಎಲ್ಲಾ ಹಮಾಲಿ ಕಾರ್ಮಿಕರು ಪಾಲ್ಗೊಂಡಿದ್ದರು.